ಬಿಜೆಪಿ ಪರ ನಟಿ ತಾರಾ ಪ್ರಚಾರ ಏ. 18ರಂದು

17BGMTARA
Published on

ರಾಣೆಬೆನ್ನೂರ: ಹಾವೇರಿ-ಗದಗ ಲೋಕಸಭೆ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಪ್ರಚಾರಕ್ಕಾಗಿ ಏ. 18ರಂದು ನಟಿ ತಾರಾ ನಗರಕ್ಕೆ ಭೇಟಿ ನೀಡಲಿದ್ದಾರೆ.
ಅಂದು ನಗರದ ಭಾರತೀಯ ಜನತಾ ಪಕ್ಷದ ಕಚೇರಿಗೆ ಆಗಮಿಸುವ ಅವರು ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡು ಮತಯಾಚನೆ ಮಾಡಲಿದ್ದಾರೆ ಎಂದು ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಸೃಷ್ಟಿ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net