ಸಮಸ್ಯೆಗಳ ವಿರುದ್ದ ಹೋರಾಟಕ್ಕೆ ಬಿಜೆಪಿ ರೈತ ಮೋರ್ಚಾ ತೀರ್ಮಾನ

BJP-logo 11
Published on

ಬೆಂಗಳೂರು:
ರಾಜ್ಯದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುವ ಮೂಲಕ ರಾಜ್ಯ ಸರ್ಕಾರ ಗಮನ ಸೆಳೆಯಲು ಬಿಜೆಪಿ ರೈತ ಮೋರ್ಚಾ ತೀರ್ಮಾನಿಸಿದೆ.
ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳು ಈ ಬಗ್ಗೆ ಚರ್ಚೆ ನಡೆಸಿದ್ದು, ರಾಜ್ಯ ಸರ್ಕಾರದ ವೈಲ್ಯಗಳ ಬಗ್ಗೆ ಹಂತ ಹಂತವಾಗಿ ಹೋರಾಟ ರೂಪಿಸಲು ಮುಂದಾಗಿದ್ದಾರೆ.
ಕೇಂದ್ರದ ಸೂಚನೆ ಮೇರೆಗೆ ಇದೇ ೆ.12ರಂದು ಗ್ರಾಮ ಪರಿಕ್ರಮ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ಹಮ್ಮಿಕೊಳ್ಳಲು ತಯಾರಿ ನಡೆಸಲು ಸೂಚಿಸಲಾಗಿದೆ.
ಪ್ರತಿ ಜಿಲ್ಲೆಯ ಅಧ್ಯಕ್ಷರು ಪ್ರತಿ ನಿತ್ಯ ಕನಿಷ್ಠ 5 ಗ್ರಾಮಗಳಿಗೆ ಭೇಟಿ ನೀಡಬೇಕು ಎಂದು ಕೇಂದ್ರದ ಬಿಜೆಪಿ ನಾಯಕರು ಸೂಚನೆ ನೀಡಿದ್ದಾರೆ. ಕೇಂದ್ರದ ಬಿಜೆಪಿ ಮೋರ್ಚಾ ಅಧ್ಯಕ್ಷರು ಇಡೀ ದೇಶದಲ್ಲಿ ಗ್ರಾಮ ಪರಿಕ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net