ಎಲ್ಲ ಚುನಾವಣೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಶ್ರಮಿಸಿ

je721538035802367-abc
Published on

ರಾಣೆಬೆನ್ನೂರ: ಉತ್ತರ ಭಾರತದಲ್ಲಿ ಕರ್ನಾಟಕ ಬಿಜೆಪಿಯ ಭದ್ರಕೋಟೆಯಾಗಿದ್ದು ಈಗ ಮತ್ತೊಮ್ಮೆ ಕಾರ್ಯಕರ್ತರೆಲ್ಲ ಸಂಘಟನೆಗಾಗಿ ಶ್ರಮಿಸಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ವಿಧಾನಸಭೆಯಿಂದ ಹಿಡಿದು ಗ್ರಾಪಂ ವರೆಗೆ ಎಲ್ಲ ಚುನಾವಣೆಗಳಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು ಕೇಂದ್ರ ಮಾಜಿ ಸಚಿವ ಹಾಗೂ ಸಂಟನಾ ಪರ್ವದ ರಾಜ್ಯ ಪ್ರಭಾರಿ ಪಿ. ರಾಧಾಕೃಷ್ಣನ್​ ಹೇಳಿದರು.

ತಾಲೂಕಿನ ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ನಡೆಯಲಿರುವ ಬಿಜೆಪಿ ಸಂಘಟನಾ ಪರ್ವದ ಅಂಗವಾಗಿ ಜಿಲ್ಲೆಗೆ ಆಗಮಿಸಿದ ಅವರು ಬೂತ್​ ಸಮಿತಿಯನ್ನು ರಚಿಸಿ, ಬೂತ್​ ಅಧ್ಯಕ್ಷರ ಮನೆಗೆ ಭೇಟಿ ಮಾತನಾಡಿದರು.

ಬಿಜೆಪಿ ಪಕ್ಷಕ್ಕೆ ಈ ಭಾಗದಲ್ಲಿ ಒಳ್ಳೆಯ ಅವಕಾಶವಿದೆ. ಆದ್ದರಿಂದ ಪಕ್ಷದ ಮುಖಂಡರು, ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ಈ ಹಿಂದೆ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರು.

ಪ್ರಮುಖರಾದ ಪರಮೇಶಪ್ಪ ಗೂಳಣ್ಣನವರ, ಸಿದ್ದು ಚಿಕ್ಕಬಿದರಿ, ಮಂಜುನಾಥ ಓಲೇಕಾರ ಹಾಗೂ ಪಕ್ಷದ ಹಿರಿಯ ಮುಖಂಡರು,ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net