ಡಿಕೆಶಿ ವಿರುದ್ಧದ ಸಿಬಿಐ ಕೇಸ್​ ವಾಪಸ್; ಸಂವಿಧಾನವನ್ನು ತಿರುಚುವ ಬುದ್ದಿ ಕಾಂಗ್ರೆಸ್ಸಿಗರ ರಕ್ತದಲ್ಲೇ ಇದೆ ಎಂದ ಬಿಜೆಪಿ

bjp
Published on

ಬೆಂಗಳೂರು: ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ವಿರುದ್ಧ ಕೇಂದ್ರಿಯಾ ತನಿಖಾ ಸಂಸ್ಥೆ(CBI) ನಡೆಸುತ್ತಿರುವ ತನಿಖೆಯನ್ನು ಹಿಂಪಡೆಯಲು ಮುಂದಾಗಿರುವ ರಾಜ್ಯ ಕಾಂಗ್ರೆಸ್​ ಸರ್ಕಾರದ ಕ್ರಮಕ್ಕೆ ವಿಪಕ್ಷ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ರಾಜ್ಯ ಬಿಜೆಪಿ ಘಟಕ, ಭ್ರಷ್ಟಾಚಾರವನ್ನು ಮುಚ್ಚಿಹಾಕಲು ಸಂವಿಧಾನವನ್ನು ತಿರುಚುವ ಬುದ್ದಿ ಕಾಂಗ್ರೆಸ್ಸಿಗರ ರಕ್ತದಲ್ಲೇ ಇದೆ ಎಂದು ಆರೋಪಿಸಿದೆ.

ಸ್ವಘೋಷಿತ ಸಂವಿಧಾನ ತಜ್ಞ ಸಿದ್ದರಾಮಯ್ಯ ಅವರು ಅಕ್ರಮ ಆಸ್ತಿ ಗಳಿಕೆ ಆರೋಪಿ ಡಿ.ಕೆ. ಶಿವಕುಮಾರ್ ಅವರನ್ನು ರಕ್ಷಿಸಲು ಸಂವಿಧಾನವನ್ನೇ ಗಾಳಿಗೆ ತೂರಿದ್ದಾರೆ. ಡಿ. ಕೆ. ಶಿವಕುಮಾರ್ ಅವರ ಖಾಸಗಿ ವಕೀಲರನ್ನೇ ಅಡ್ವೋಕೇಟ್ ಜನರಲ್ ಆಗಿ ನೇಮಿಸಿ, ಈಗ ತನಿಖೆ ಹಿಂಪಡೆಯಲು ಅಡ್ವೋಕೇಟ್ ಜನರಲ್ ಅವರಿಂದಲೇ ಶಿಫಾರಸು ಮಾಡುವ ಷಡ್ಯಂತರ ರೂಪಿಸಿದ್ದಾರೆ.

ತಮ್ಮ ವೈಯಕ್ತಿಕ ಹಿತಾಸಕ್ತಿಯನ್ನು ಸರ್ಕಾರದ ಹಿತಾಸಕ್ತಿಯಾಗಿಸಿ ರಾಜ್ಯದ ಸಮಸ್ತ ಜನರ ಕಿವಿಗೆ ಹೂವು ಮುಡಿಸಿದ್ದಾರೆ. ಭ್ರಷ್ಟಾಚಾರವನ್ನು ಮುಚ್ಚಿಹಾಕಲು ಸಂವಿಧಾನವನ್ನು ತಿರುಚುವ ಬುದ್ದಿ ಕಾಂಗ್ರೆಸ್ಸಿಗರ ರಕ್ತದಲ್ಲೇ ಇದೆ ಎಂದು ರಾಜ್ಯ ಬಿಜೆಪಿ ಘಟಕ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net