

ಬೆಂಗಳೂರು: ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಷಾ ಬಿಡುವಿಲ್ಲದ ಕಾರ್ಯಕ್ರಮದ ಬಳಿಕ ಬೆಂಗಳೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಂಡು ದೆಹಲಿಗೆ ಮರಳಿದ್ದಾರೆ.
ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಏನೇನಾಯ್ತು ಎನ್ನುವ ಕುರಿತು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪತ್ರಕರ್ತರೊಂದಿಗೆ ಮಾಹಿತಿ ಹಂಚಿಕೊಂಡರು.
ಮುಂದಿನ ಚುನಾವಣೆಗೆ ಬೇಕಾದ ತಯಾರಿ ಬಗ್ಗೆ ಚರ್ಚೆಯಾಗಿದೆ. ಅಲ್ಲದೆ ಸಂಘಟನಾತ್ಮಕ ಬೆಳವಣಿಗೆ ಬಗ್ಗೆಯೂ ಮಾತುಕತೆ ನಡೆದಿದೆ. ಅದರಲ್ಲೂ ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಕುರಿತು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.
ಇನ್ನು ಸಚಿವ ಸಂಪುಟ ವಿಸ್ತರಣೆ ವಿಚಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಟ್ಟ ವಿಚಾರ. ನಿಗಮ-ಮಂಡಳಿ ವಿಚಾರ, ನಾನು ಸಿಎಂ ಕೂತು ಅಂತಿಮ ಮಾಡುತ್ತೇವೆ ಎಂದರು.