

ಎಚ್.ಡಿ.ಕೋಟೆ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನನ್ನನ್ನು ಪಕ್ಷದ ಪ್ರಮುಖರು ಪರಿಗಣಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಸಿ.ಲಕ್ಷ್ಮಣ್ ಹೇಳಿದರು.
ಗಡಿ ಭಾಗದ ತಾಲೂಕಿನ ಮಾಜಿ ಶಾಸಕರ ಪುತ್ರನಾದ ನನಗೆ ಪಕ್ಷದ ವರಿಷ್ಠರು ಟಿಕೆಟ್ ನೀಡಿದರೆ ಸ್ಥಳೀಯರಿಗೆ ಆದ್ಯತೆ ನೀಡಿದಂತಾಗುತ್ತದೆ ಎಂದು ಅವರು ಶುಕ್ರವಾರ ಸುದ್ದಿ ಗೋಷ್ಠಿಯಲ್ಲಿ ಹೇಳಿದರು. ಕಳೆದ 15 ವರ್ಷಗಳಿಂದ ಬಿಜೆಪಿಯಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ನಾನು ಕೆಲಸ ನಿರ್ವಹಿಸಿದ್ದೇನೆ. ನಮ್ಮ ತಂದೆ ಎಚ್. ಬಿ. ಚೆಲುವಯ್ಯ ಅವರು ಕ್ಷೇತ್ರದ ಶಾಸಕರಾಗಿ ಸೇವೆ ಮಾಡಿದ್ದಾರೆ.
ಅವರ ದಾರಿಯಲ್ಲೇ ನಡೆಯುತ್ತಿರುವ ನನಗೆ ಈ ಬಾರಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟರೆ ಪಕ್ಷದ ಗೆಲುವಿಗೆ ಸಹಕಾರವಾಗಲಿದೆ ಎಂದರು.
ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಆಗತ್ತೂರು ಎಂ ದಾಸಪ್ಪ, ಜಿಪಂ ಮಾಜಿ ಸದಸ್ಯ ವೆಂಕಟಸ್ವಾಮಿ, ಬಿಜೆಪಿ ಮಾಜಿ ತಾಲೂಕು ಅಧ್ಯಕ್ಷರಾದ ಶಿವರಾಜಪ್ಪ, ಯೋಗೇಶ್ ಕುಮಾರ್, ಕಾಟವಾಳ್ ನಟರಾಜ್ ಮುಖಂಡರಾದ ಮನಗನಹಳ್ಳಿ ಮಂಜುನಾಥ್, ಒಕ್ಕಲಿಗರ ಸಂಘದ ತಾಲೂಕು ಮಾಜಿ ಅಧ್ಯಕ್ಷ ಟಿ. ವೆಂಕಟೇಶ್ ಇತರರು ಇದ್ದರು.