ದೆಹಲಿ CM ಯಾರು?; ಗೊಂದಲದ ನಡುವೆ ಫೆ. 20ಕ್ಕೆ ಪ್ರಮಾಣವಚನ ಕಾರ್ಯಕ್ರಮ ಫಿಕ್ಸ್​​​

Modi Shah Nadda
Published on

ನವದೆಹಲಿ: ಫೆಬ್ರವರಿ 08ರಂದು ಪ್ರಕಟವಾದ ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಷ್ಟ್ರರಾಜಧಾನಿಯ ಗದ್ದುಗೆಯನ್ನು ಏರಿದ್ದು, ಕಮಲ ಪಾಳಯದಲ್ಲಿ ಮುಖ್ಯಮಂತ್ರಿ (CM) ಆಯ್ಕೆ ಕಸರತ್ತು ಜೋರಾಗಿ ನಡೆಯುತ್ತಿದೆ.

ಮುಖ್ಯಮಂತ್ರಿ (CM) ಆಯ್ಕೆ ಸಂಬಂಧ ಇಂದು (ಫೆಬ್ರವರಿ 17) ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ಉದ್ಧೇಶಿಸಿತ್ತು. ಆದರೆ, ಅನಿವಾರ್ಯ ಕಾರಣಗಳಿಂದ ಕಾರ್ಯಕ್ರಮವನ್ನು ಫೆಬ್ರವಿ 19ಕ್ಕೆ ಮುಂದೂಡಲಾಗಿದ್ದು, ಫೆಬ್ರವರಿ 20ರಂದು ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ ಎಂದು ಉನ್ನತ ಸುದ್ದಿ ಮೂಲಗಳು ತಿಳಿಸಿದೆ.

BJP

ಪ್ರಧಾನಿ ಮೋದಿ ವಿದೇಶ ಪ್ರವಾಸ ಮುಗಿಸಿಕೊಂಡು ಭಾರತಕ್ಕೆ ವಾಪಸ್​ ಆದ ಬಳಿಕ ನೂತನ ಮುಖ್ಯಮಂತ್ರಿ (CM) ಆಯ್ಕೆ ನಡೆಯಲಿದೆ ಎಂದು ಹೇಳಲಾಗಿತ್ತು. ಆದರೆ, ಅನಿವಾರ್ಯ ಕಾರಣಗಳಿಂದ ಸಭೆ ಮುಂದೂಡಲಾಗುತ್ತಿದ್ದು, ಫೆಬ್ರವರಿ 19ರಂದು ದೆಹಲಿಯ ನೂತನ ಮುಖ್ಯಮಂತ್ರಿ ಹೆಸರು ಹೊರಬೀಳುವುದು ಪಕ್ಕಾ ಎಂದು ಹೇಳಲಾಗಿದೆ.

ದೆಹಲಿ ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಎನ್‌ಡಿಎ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಕಾರ್ಪೊರೇಟ್ ಜಗತ್ತಿನ ಕೈಗಾರಿಕೋದ್ಯಮಿಗಳು, ಚಲನಚಿತ್ರ ತಾರೆಯರು, ಕ್ರಿಕೆಟ್ ಆಟಗಾರರು, ಸಂತರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net