

ಹೊಸದಿಲ್ಲಿ: ನಮ್ಮ ಏಳು ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರನ್ನು ಬೇಟೆಯಾಡಲು ಬಿಜೆಪಿ ಪ್ರಯತ್ನಿಸಿದೆ ಎಂದು ನೇರವಾಗಿ ಆರೋಪಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಕ್ಷವನ್ನು ಬದಲಾಯಿಸಲು 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷ ಒಡ್ಡಿದ್ದಾರೆ ಎಂದು ಹೇಳಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿದ ಕೇಜ್ರಿವಾಲ್, "ಇತ್ತೀಚೆಗೆ ನಮ್ಮ ದೆಹಲಿಯ ಏಳು ಶಾಸಕರನ್ನು ಬಿಜೆಪಿಗರು ಸಂಪರ್ಕಿಸಿ, ಕೆಲವು ದಿನಗಳ ಬಳಿಕ ನಾವು ಕೇಜ್ರಿವಾಲ್ ಅವರನ್ನು ಬಂಧಿಸುತ್ತೇವೆ. ನಂತರ ನಿಮ್ಮ ಶಾಸಕರನ್ನು ಒಡೆಯುತ್ತೇವೆ. 21 ಶಾಸಕರೊಂದಿಗೆ ಮಾತುಕತೆಯೂ ಸಹ ನಡೆಸಲಾಗಿದೆ ಎಂದು ಹೇಳಿದ್ದಾರೆ. ಇತರರೊಂದಿಗೂ ಮಾತನಾಡುತ್ತೇವೆ. ಆದಾದ ಮೇಲೆ ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಉರುಳಿಸುತ್ತೇವೆ" ಎಂದಿದ್ದಾರೆ.
"ನೀವೂ ಕೂಡ ಬರಬಹುದು. 25 ಕೋಟಿ ರೂ. ನೀಡ್ತೇವೆ, ಬಿಜೆಪಿ ಟಿಕೆಟ್‌ನಲ್ಲಿ ಚುನಾವಣೆಗೆ ಸ್ಪರ್ಧಿಸಿ ಎಂದು ಹೇಳಿದ್ದಾರೆ. ಅವರ ಪ್ರಕಾರ, ನಾವು 21 ಶಾಸಕರನ್ನು ಸಂಪರ್ಕಿಸಿದ್ದೇವೆ ಎಂದು ತಿಳಿಸಿದ್ದಾರೆ. ಆದ್ರೆ, ನಮ್ಮ ಮಾಹಿತಿಯ ಪ್ರಕಾರ ಕೇವಲ 7 ಶಾಸಕರನ್ನು ಮಾತ್ರ ಸಂಪರ್ಕಿಸಲಾಗಿದ್ದು, ಅವರೆಲ್ಲರೂ ನಿರಾಕರಿಸಿದ್ದಾರೆ" ಎಂದು ಸಿಎಂ ಹೇಳಿದ್ದಾರೆ.