

ಹೊಸದಿಲ್ಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಮತ್ತು ದೆಹಲಿ ಮುಖ್ಯಮಂತ್ರಿಯಾದ ಅರವಿಂದ್ ಕೇಜ್ರಿವಾಲ್ ಇಂದು ಸತತ ಐದನೇ ಬಾರಿಗೆ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಹಾಜರಾಗುವುದನ್ನು ತಪ್ಪಿಸಿದ್ದಾರೆ. ಈ ಬೆನ್ನಲ್ಲೇ ಸಿಎಂ ಕೇಜ್ರಿವಾಲ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದು, ಭ್ರಷ್ಟಾಚಾರ ಸರ್ಕಾರ ಇದು ಕರೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ತಡೆಯಲು ಭಾರೀ ಹರಸಾಹಸ ಪಟ್ಟಿದ್ದಾರೆ. ಕೂಡಲೇ ಹೆಚ್ಚುವರಿ ಪೊಲೀಸರು ಸ್ಥಳದಲ್ಲಿ ನಿಯೋಜನೆಗೊಂಡಿದ್ದು, ಬ್ಯಾರಿಕೇಡ್ಗಳನ್ನು ಹಾಕಿ ತಡೆಯಲು ಮುಂದಾಗಿದ್ದಾರೆ. ಆದ್ರೆ, ಬ್ಯಾರಿಕೇಡ್ ಮುರಿದ ಕಾರ್ಯಕರ್ತರು ದೆಹಲಿ ಸಿಎಂ ವಿರುದ್ಧ ಘೋಷಣೆಗಳನ್ನು ಕೂಗಿ ಹೋರಾಟ ಮುಂದುವರೆಸಿದ್ದಾರೆ.
ಅತ್ತ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದರೆ, ಇತ್ತ ಎಎಪಿ ಕಾರ್ಯಕರ್ತರು ಇತ್ತೀಚೆಗೆ ಮುಕ್ತಾಯಗೊಂಡ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಮೋಸ ಮಾಡಿದೆ ಎಂದು ಆರೋಪಿಸಿ ಮುಖ್ಯರಸ್ತೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ,(ಏಜೆನ್ಸೀಸ್).