ಚಾಮರಾಜನಗರ ಜಿಲ್ಲಾ ಉಸ್ತುವಾರಿಗೆ ಸಚಿವ ಸುರೇಶ್ ಕುಮಾರ್ ಬೇಡ: ಬಿಜೆಪಿ ಮುಖಂಡರಿಂದಲೇ ಅಸಮಾಧಾನದ ಕೂಗು!

Suresh Kumar 7 March 20
Published on

ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್​ ಅವರ ಬಗ್ಗೆ ಸ್ವಪಕ್ಷೀಯರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆ ಮಾಡುವಲ್ಲಿ ಸಚಿವರು ವಿಫಲರಾಗಿದ್ದಾರೆ. ಅವರು ಇಲ್ಲಿಗೆ ಬರುವುದು ಯಾವ ಕಾರ್ಯರ್ಕರಿಗೂ ತಿಳಿಯುತ್ತಿಲ್ಲ ಎಂದು ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಕೆಲ್ಲಂಬಳ್ಳಿ ಸೋಮನಾಯಕ ಆರೋಪ ಮಾಡಿದ್ದಾರೆ.

ಕಾರ್ಯಕರ್ತರ ಸಮಸ್ಯೆಗಳಿಗೆ ಸುರೇಶ್​ ಕುಮಾರ್ ಸ್ಪಂದಿಸುತ್ತಿಲ್ಲ. ಸ್ಥಳೀಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಫೋನ್​ ಮಾಡಿದರೆ ತೆಗೆಯುವುದಿಲ್ಲ. ಜಿಲ್ಲೆಯಲ್ಲಿ ಏನು ಅಭಿವೃದ್ಧಿ ಆಗುತ್ತಿದೆ ಎಂಬುದೇ ತಿಳಿಯುತ್ತಿಲ್ಲ. ಇದೇ ರೀತಿ ಆದರೆ ಮುಂಬರುವ ಗ್ರಾಪಂ ಚುನಾವಣೆಯಲ್ಲಿ ಸೋಲುವುದು ನಿಶ್ಚಿತ ಎಂದು ಸೋಮನಾಯಕ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸುರೇಶ್​ ಕುಮಾರ್ ಬದಲು ಸಚಿವ ವಿ.ಸೋಮಣ್ಣನವರನ್ನೇ ನಮ್ಮ ಜಿಲ್ಲೆಗೆ ಉಸ್ತುವಾರಿಯನ್ನಾಗಿ ನೇಮಿಸಿದರೆ ಒಳ್ಳೆಯದು ಎಂದು ಹೇಳಿದ್ದಾರೆ. (ದಿಗ್ವಿಜಯ ನ್ಯೂಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net