ಬಾಂಗ್ಲಾ ವಲಸಿಗರ ವಿಚಾರದಲ್ಲಿ ಬಿಜೆಪಿ ಅಪಪ್ರಚಾರ

ಕಾಂಗ್ರೆಸ್ ಪಕ್ಷವು ಅಕ್ರಮ ಬಾಂಗ್ಲಾ ವಲಸಿಗರಿಗೆ ರಕ್ಷಣೆ ನೀಡುತ್ತಿದೆ ಎಂಬ ಬಿಜೆಪಿಯ ಆರೋಪ ತೀರಾ ಸುಳ್ಳಾಗಿದ್ದು, ದೇಶದಿಂದ ಅತಿ ಹೆಚ್ಚು ವಲಸಿಗರನ್ನು ಹೊರದಬ್ಬಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು.
ಕಾಂಗ್ರೆಸ್ ಪಕ್ಷವು ಅಕ್ರಮ ಬಾಂಗ್ಲಾ ವಲಸಿಗರಿಗೆ ರಕ್ಷಣೆ ನೀಡುತ್ತಿದೆ ಎಂಬ ಬಿಜೆಪಿಯ ಆರೋಪ ತೀರಾ ಸುಳ್ಳಾಗಿದ್ದು, ದೇಶದಿಂದ ಅತಿ ಹೆಚ್ಚು ವಲಸಿಗರನ್ನು ಹೊರದಬ್ಬಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು.
Published on
ಮಂಗಳೂರು: ಕಾಂಗ್ರೆಸ್ ಪಕ್ಷವು ಅಕ್ರಮ ಬಾಂಗ್ಲಾ ವಲಸಿಗರಿಗೆ ರಕ್ಷಣೆ ನೀಡುತ್ತಿದೆ ಎಂಬ ಬಿಜೆಪಿಯ ಆರೋಪ ತೀರಾ ಸುಳ್ಳಾಗಿದ್ದು, ದೇಶದಿಂದ ಅತಿ ಹೆಚ್ಚು ವಲಸಿಗರನ್ನು ಹೊರದಬ್ಬಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು.
ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಷ್ಟು ಮಂದಿ ಬಾಂಗ್ಲಾದೇಶಿಯರನ್ನು ಹೊರಹಾಕಲಾಗಿದೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಬಿಜೆಪಿ ನಾಯಕರಿಗೆ ನೇರ ಸವಾಲು ಹಾಕಿದರು.
ಸುರತ್ಕಲ್ ಮತ್ತು ಮಂಗಳೂರಿನಲ್ಲಿ ಬಾಂಗ್ಲಾದೇಶಿಯರನ್ನು ಪತ್ತೆ ಹಚ್ಚುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕೆಲಸ ಮಾಡಿದೆ. ನಾವು ಅವರಿಗೆ ರಕ್ಷಣೆ ನೀಡಿದ್ದೇವೆ ಎಂಬುದಕ್ಕೆ ಒಂದೇ ಒಂದು ಉದಾಹರಣೆ ತೋರಿಸಲಿ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ 10 ವರ್ಷಗಳ ಅವಧಿಯಲ್ಲಿ ಸುಮಾರು 83,000 ಅಕ್ರಮ ಬಾಂಗ್ಲಾದೇಶಿಯರನ್ನು ಗುರುತಿಸಿ ದೇಶದಿಂದ ಹೊರಗಟ್ಟಲಾಗಿದೆ. ಕಳೆದ 12 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ಅವರ ಸರ್ಕಾರ ಹೊರಹಾಕಿದ ಬಾಂಗ್ಲಾದೇಶಿಯರ ಸಂಖ್ಯೆ ಕೇವಲ 8,000 ಮಾತ್ರ. ಗಡಿ ಕಾಯುವ ಮತ್ತು ನುಸುಳುವಿಕೆಯನ್ನು ತಡೆಯುವ ಸಂಪೂರ್ಣ ಜವಾಬ್ದಾರಿ ಕೇಂದ್ರ ಸರ್ಕಾರದ ಮೇಲಿದ್ದರೂ, ಗಡಿಯಲ್ಲಿ ನುಸುಳುಕೋರರಿಗೆ ಮುಕ್ತ ಅವಕಾಶ ನೀಡಿ ಈಗ ವಿಪಕ್ಷಗಳ ಮೇಲೆ ಗೂಬೆ ಕೂರಿಸಲಾಗುತ್ತಿದೆ ಎಂದರು.
ವಲಸಿಗರ ಹೆಸರಿನಲ್ಲಿ ಮುಸ್ಲಿಂ ಬಾಂಧವರು ಹಾಗೂ ಅಲ್ಪಸಂಖ್ಯಾತರಿಗೆ ಅಪಮಾನ ಮಾಡಿ, ನೈಜ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಹುನ್ನಾರವನ್ನು ಬಿಜೆಪಿ ನಡೆಸುತ್ತಿದೆ. ನೈಜ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಕಾಂಗ್ರೆಸ್ 54,000 ಬೂತ್‌ಗಳಲ್ಲಿ ಬಿಎಲ್‌ಎ-2 (ಃಐಂ-2) ಗಳನ್ನು ನೇಮಿಸಿ ಚುನಾವಣಾ ಆಯೋಗಕ್ಕೆ ಸಂಪೂರ್ಣ ಸಹಕಾರ ನೀಡುತ್ತಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಪಿಆರ್‌ಸಿ ಪಡೆಯುವುದನ್ನು ಪಿಡಿಒ ಮಟ್ಟದಲ್ಲಿ ಸರಳೀಕರಿಸಲಾಗಿದೆಯೇ ಹೊರತು ಯಾವುದೇ ಹೊಸ ಕಾಯ್ದೆ ತಂದಿಲ್ಲ. ಬಾಂಗ್ಲಾದೇಶಿಯರಿಗೆ ಮತದಾನದ ಹಕ್ಕು ನೀಡಲು ಪಿಆರ್‌ಸಿ ಬಳಸಲಾಗುತ್ತಿದೆ ಎಂಬ ಆರೋಪ ಸಂಪೂರ್ಣ ಸುಳ್ಳು ಎಂದರು.
ಕಾಂಗ್ರೆಸ್ ಮುಖಂಡರಾದ ಅಪ್ಪಿ, ಶಶಿಧರ ಹೆಗ್ಡೆ, ಭಾಸ್ಕರ ಮೊಯ್ಲಿ, ನಾಗೇಂದ್ರ ಕುಮಾರ್, ಭಾಸ್ಕರ ರಾವ್, ಸತೀಶ್ ಪೆಂಗಲ್, ಜೇಮ್ಸ್ ಪ್ರವೀಣ್, ಆಲ್ಟನ್ ಡಿಕುನ್ನಾ, ಇಮ್ರಾನ್, ಮನೀಶ್ ಬೋಳಾರ್, ಮನೋಜ್ ಎಂ.ಪಿ. ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net