Delhi Polls| ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

Arvind Kejriwal
Published on

ನವದೆಹಲಿ: ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಗೆ (Delhi Assembly Election) ಸಂಬಂಧಿಸಿದಂತೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

70 ಸದಸ್ಯಬಲದ ದೆಹಲಿ ವಿಧಾನಸಭೆ ಚುನಾವಣೆಗೆ (Delhi Assembly Election) ಸಂಬಂಧಿಸಿದಂತೆ 29 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಮಾಜಿ ಸಿಎಂ ಅರವಿಂದ್​  ಕೇಜ್ರಿವಾಲ್​ ಎದುರು ಬಿಜೆಪಿಯ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಸ್ಫರ್ಧಿಸುತ್ತಿದ್ದಾರೆ. 

ದೆಹಲಿ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ ಕೈಲಾಶ್​ ಗೆಹ್ಲೋಟ್​ ಬಿಜ್ವಾಸನ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಮಾಜಿ ಸಂಸದ ರಮೇಶ್​ ಬಿಧುರಿಯನ್ನು ಸಿಎಂ ಅತಿಶಿ ಎದುರು ಕಣಕ್ಕಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net