BLAST ದೆಹಲಿಯಲ್ಲಿ ಭೀಕರ ಸ್ಪೋಟ, ವಾಣಿಜ್ಯ ನಗರಿಯಲ್ಲೂ ಹೈ ಅಲರ್ಟ್...

ಹುಬ್ಬಳ್ಳಿಯ ರೈಲು ನಿಲ್ದಾಣದಲ್ಲಿ ಪೊಲೀಸರಿಂದ ಪರಿಶೀಲನೆ
ಹುಬ್ಬಳ್ಳಿಯ ರೈಲು ನಿಲ್ದಾಣದಲ್ಲಿ ಪೊಲೀಸರಿಂದ ಪರಿಶೀಲನೆ
Published on
ಹುಬ್ಬಳ್ಳಿ: ದೆಹಲಿ ಕೆಂಪುಕೋಟೆ ಬಳಿ ಕಾರ್‌ನಲ್ಲಿ ಭೀಕರ ಸ್ಪೋಟ (BLAST )ಸಂಭವಿಸಿದ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿಯ ರೈಲ್ಚೆ ನಿಲ್ದಾಣದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಹು- ಧಾ ಆಯುಕ್ತಾಲಯ ಹಾಗೂ ಆರ್‌ಪಿಎಫ್‌ನಿಂದ ರೈಲ್ವೆ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಯಿತು. ಶ್ವಾನದಳ ಮತ್ತು ಮೆಟಲ್ ಡಿಟೆಕ್ಟರ್ ಮೂಲಕ ಪ್ರಯಾಣಿಕರ ಲಗೇಜ್ ನಿರಂತರವಾಗಿ ತಪಾಸಣೆ ಮಾಡಲಾಗುತ್ತಿದೆ. ರೈಲ್ವೆ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರ ಮೇಲೂ ಪೊಲೀಸರು ನಿಗಾ ಇರಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ದೆಹಲಿಯಲ್ಲಿ ಸ್ಫೋಟ (BLAST )ಪ್ರಕರಣದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಹಿರಿಯ ಅಧಿಕಾರಿಗಳ ನಿರ್ದೇಶನದ ಮೇರೆಗೆ ಶ್ವಾನ ದಳದಿಂದಲೂ ತಪಾಸಣೆ ಮಾಡಲಾಗಿದೆ. ಹೆಚ್ಚುವರಿ ಭದ್ರತೆಗಾಗಿ ಈಗಾಗಲೇ ಸಿಬ್ಬಂದಿ ನೇಮಕ ಮಾಡಲಾಗಿದೆ. ವಾಹನಗಳ ತಪಾಸಣೆ ಕೂಡಾ ನಡೆಸಲಾಗುತ್ತಿದೆ. ಧಾರ್ಮಿಕ ಕೇಂದ್ರ, ಜನ ಸಂದಣಿ ಪ್ರದೇಶಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಶಂಕಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ತಪಾಸಣೆ ಮಾಡಲಾಗುವುದು ಎಂದು ತಿಳಿಸಿದರು.

 ಗಳಲ್ಲೂ ಹೈ ಅಲರ್ಟ್

ದೆಹಲಿ ಘಟನೆ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯ ಎಲ್ಲ ನಿಲ್ದಾಣಗಳಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ. ರೈಲ್ವೆಯ ಪ್ರಧಾನ ಮುಖ್ಯ ಭದ್ರತಾ ಆಯುಕ್ತ ಆರ್.ಎಸ್. ಸಿಂಗ್ ಅವರು ಭದ್ರತಾ ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ. ನಿಲ್ದಾಣಗಳಲ್ಲಿ ಮತ್ತು ಎಲ್ಲ ರೈಲುಗಳಲ್ಲಿ ಸಂಪೂರ್ಣ ತಪಾಸಣೆ ನಡೆಸಲು ಸೂಚನೆ ನೀಡಿದ್ದಾರೆ. ಪ್ರವೇಶ ದ್ವಾರಗಳಲ್ಲಿ ಪ್ರಯಾಣಿಕರು ಮತ್ತು ಅವರ ವಸ್ತುಗಳನ್ನು ಎಚ್ಚರಿಕೆಯಿಂದ ಪರೀಕ್ಷಿಸಲಾಗುತ್ತಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net