ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸ್ಫೋಟ; ಇಬ್ಬರ ಬಂಧನ| blast

jammu feb 10 2020
Published on

ದೋಡಾ : ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಜಮೈ ಮಸೀದಿ ಬಳಿಯ ದುಮ್ರಿ ಮೊಹಲ್ಲಾದಲ್ಲಿ ಇಂದು (ಸೆ.11) ಶಂಕಿತ ಸ್ಫೋಟ ಸಂಭವಿಸಿದ್ದು, ಆ ಪ್ರದೇಶದಲ್ಲಿ ತೀವ್ರ ಭೀತಿ ಉಂಟಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ತನಿಖೆ ಆರಂಭಿಸಿದ್ದಾರೆ. ಇನ್ನೂ ಈ ಸ್ಫೋಟಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷದ ಏಕೈಕ ಶಾಸಕರಾಗಿರುವ ಮೆಹ್ರಾಜ್ ಮಲಿಕ್ ಅವರನ್ನು ಬಂಧಿಸಿದ ನಂತರ ದೋಡಾ ಜಿಲ್ಲೆಯಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕಠಿಣ ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್ಎ) ಅಡಿಯಲ್ಲಿ ಮಲಿಕ್ ಅವರನ್ನು ಬಂಧಿಸಿದ್ದಾರೆ. ಸರ್ಕಾರಿ ಅಧಿಕಾರಿಯ ವಿರುದ್ಧ ನಿಂದನೀಯ ಭಾಷೆ ಬಳಸಿದ ಆರೋಪದ ಮೇಲೆ ದೋಡಾ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯಲ್ಲಿಯೂ ಗೆಲುವು ಸಾಧಿಸಿದ್ದ ಮಲಿಕ್ ವಿರುದ್ಧ ಎಫ್‌ಐಆರ್ ದಾಖಲಾದ ನಂತರ ಅವರನ್ನು ಬಂಧಿಸಲಾಗಿದೆ.

ದೋಡಾ ಜಿಲ್ಲೆಯಲ್ಲಿ ಗುರುವಾರ ಸತತ ಮೂರನೇ ದಿನವೂ ನಿಷೇಧಾಜ್ಞೆ ಜಾರಿಯಲ್ಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮೊಬೈಲ್ ಇಂಟರ್ನೆಟ್ ಮತ್ತು ವೈಫೈ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಆಡಳಿತಾತ್ಮಕ ಅತಿರೇಕದ ಆರೋಪದ ಮೇರೆಗೆ ಉದ್ವಿಗ್ನತೆ ಉಂಟಾಗಿರುವ ನಡುವೆ ದೋಡಾ ಪಟ್ಟಣ, ಭದೇರ್ವಾ, ಗಂಡೋಹ್ ಮತ್ತು ಥಾಥ್ರಿ ಸುತ್ತಮುತ್ತ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸರ್ಕಾರಿ ಕಚೇರಿಗಳ ಬಳಿ ಕನ್ಸರ್ಟಿನಾ ತಂತಿಗಳನ್ನು ಅಳವಡಿಸಲಾಗಿದೆ.

(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net