ʼಸರಿಗಮಪʼ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನ..Singer Manjamma

Singer Manjamma
Published on

Singer Manjamma:   ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಮಂಜಮ್ಮ ಅವರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ಮಂಜಮ್ಮ ಅವರು ಮಧುಗಿರಿ ತಾಲೂಕಿನ ಡಿ.ವಿ‌ ಹಳ್ಳಿಯ ಗ್ರಾಮದವರು. ಇವರಿಗೆ ರತ್ನಮ್ಮ ಅನ್ನೋ ಸಹೋದರಿ ಇದ್ದಾರೆ. ಇಬ್ಬರು ಅಕ್ಕ-ತಂಗಿ. ಹುಟ್ಟಿನಿಂದ ಇಬ್ಬರಿಗೂ ಕಣ್ಣಿಲ್ಲ. ಮಂಜಮ್ಮ ನಿಧನ ಹಿನ್ನೆಲೆಯಲ್ಲಿ ಅಕ್ಕ ರತ್ನಮ್ಮ ಕಂಗಾಲಾಗಿದ್ದಾರೆ.

ಈ ಇಬ್ಬರು ದಂಡಿನ ಮಾರಮ್ಮ ದೇವಸ್ಥಾನದ ಮುಂದೆ ಹಾಡು ಹೇಳುತ್ತಿದ್ದರು.ಇವರ ಪ್ರತಿಭೆಯನ್ನು ನೋಡಿದ ಸರಿಗಮಪ ವೇದಿಕೆ ಅವಕಾಶ ಕೊಡಿಕೊಟ್ಟಿತ್ತು.ಜೀ ಕನ್ನಡದ ಸರಿಗಮಪ ವೇದಿಕೆಯಲ್ಲಿ ಹಾಡುವ ಮೂಲಕ ಮತ್ತಷ್ಟು ಜನಪ್ರಿಯಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net