ಗಂಗೊಳ್ಳಿಯಲ್ಲಿ ಬೃಹತ್ ರಕ್ತದಾನ ಶಿಬಿರ

gan blood
ಗಂಗೊಳ್ಳಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಉಡುಪಿ ಅಭಯಹಸ್ತ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲಿಯಾನ್ ಉದ್ಘಾಟಿಸಿದರು
Published on

ಗಂಗೊಳ್ಳಿ: ಯಕ್ಷಾಭಿಮಾನಿ ರಕ್ತದಾನಿಗಳ ಬಳಗ, ಗಂಗೊಳ್ಳಿ ಮೀನುಗಾರರ ಸಹಕಾರಿ ಸಂಘ, ಅಭಯಹಸ್ತ ಚಾರಿಟೆಬಲ್ ಟ್ರಸ್ಟ್ ಉಡುಪಿ, ಕಟ್ಟೆ ಫ್ರೆಂಡ್ಸ್ ಗಂಗೊಳ್ಳಿ, ಭಾರತೀಯ ರೆಡ್‌ಕ್ರಾಸ್ ರಕ್ತನಿಧಿ ಕೇಂದ್ರ ಕುಂದಾಪುರ ಆಶ್ರಯದಲ್ಲಿ 15ನೇ ವರ್ಷದ ಶ್ರೀ ಕ್ಷೇತ್ರ ಧರ್ಮಸ್ಥಳ ಪಾದಯಾತ್ರೆ ಪ್ರಯುಕ್ತ ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರ ಗಂಗೊಳ್ಳಿ ಶ್ರೀ ವಿಜಯ ವಿಠಲ ಮಂಟಪದಲ್ಲಿ ಮಂಗಳವಾರ ನಡೆಯಿತು.

ಉಡುಪಿ ಅಭಯಹಸ್ತ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲಿಯಾನ್ ಶಿಬಿರ ಉದ್ಘಾಟಿಸಿದರು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ಶಾಖೆ ಕಾರ್ಯದರ್ಶಿ ವೈ.ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಪತ್ರಕರ್ತ ಬಿ.ರಾಘವೇಂದ್ರ ಪೈ, ಗಂಗೊಳ್ಳಿ ಕಟ್ಟೆ ಫ್ರೆಂಡ್ಸ್ ಅಧ್ಯಕ್ಷ ರಾಘವೇಂದ್ರ ಪೂಜಾರಿ, ಗಂಗೊಳ್ಳಿಯ ಟೆಂಪೋ, ಪಿಕ್‌ಅಪ್, ಆಟೋ ಚಾಲಕ-ಮಾಲೀಕರ ಸಂಘದ ಅಧ್ಯಕ್ಷ ಅನಂತ ಪೂಜಾರಿ, ಪಾದಯಾತ್ರೆ ಬಳಗದ ಚಂದ್ರ ಖಾರ್ವಿ, ಯಕ್ಷಾಭಿಮಾನಿ ರಕ್ತದಾನಿ ಬಳಗದ ಅಧ್ಯಕ್ಷ ಅಶೋಕ ಎನ್.ಡಿ. ಮೊದಲಾದವರು ಉಪಸ್ಥಿತರಿದ್ದರು. ಸುಂದರ ಜಿ. ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net