ನಗರದ ಹೊಯ್ಸಳೇಶ್ವರ ಪದವಿ ಕಾಲೇಜಿನಲ್ಲಿ ರಕ್ತದಾನ ಶಿಬಿರ

22arsph1ep
Published on

ಅರಸೀಕೆರೆ: ನಗರದ ಹೊಯ್ಸಳೇಶ್ವರ ಪದವಿ ಕಾಲೇಜಿನಲ್ಲಿ ಎಚ್‌ಡಿಎಫ್‌ಸಿ ಬ್ಯಾಂಕ್, ತರಳಬಾಳು ನೌಕರ ಸಂಘ, ಯುವ ವೇದಿಕೆ ಲಯನ್ಸ್ ಕ್ಲಬ್, ಶ್ರೀ ಶಿವಕುಮಾರ ಬಳಗ ಹಾಗೂ ಜಿಲ್ಲಾ ರಕ್ತನಿಧಿ, ಜಿಲ್ಲಾಸ್ಪತ್ರೆ ವತಿಯಿಂದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಗಳ 31ನೇ ವರ್ಷದ ಸಂಸ್ಮರಣೆ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.

ತರಳಬಾಳು ವಿದ್ಯಾಸಂಸ್ಥೆಯ ಕೇಂದ್ರ ಸಮಿತಿ ಸದಸ್ಯ ಹಿರಿಯೂರು ರೇವಣ್ಣ ಮಾತನಾಡಿ, ಗುರುಗಳ ಸ್ಮರಣೆ ನಿಮಿತ್ತ ಪ್ರತಿವರ್ಷ ಹೊಯ್ಸಳೇಶ್ವರ ಪದವಿ ಕಾಲೇಜಿನಲ್ಲಿ ರಕ್ತದಾನ ಶಿಬಿರ ಹಾಗೂ ಗುಂಪು ರಕ್ತ ಪರೀಕ್ಷೆ ಆಯೋಜಿಸುತ್ತಿರುವುದು ಶ್ಲಾಘನೀಯ. ತರಳಬಾಳು ಶ್ರೀಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಶ್ರೀಗಳು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶಾಲಾ, ಕಾಲೇಜುಗಳನ್ನು ತೆರೆಯುವ ಮೂಲಕ ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ ಎಂದರು.

ತಾಲೂಕು ರೆಡ್‌ಕ್ರಾಸ್ ಅಧ್ಯಕ್ಷ ಫಿಸಿಯೋ ಮಧು ಮಾತನಾಡಿ, ನಿಯಮಿತವಾಗಿ ರಕ್ತದಾನ ಮಾಡುವುರಿಂದ ಆರೋಗ್ಯ ವೃದ್ಧಿಯಾಗಲಿದೆ. ಅನಗತ್ಯ ಆತಂಕ, ಗಾಳಿ ಸುದ್ದಿಗೆ ಅವಕಾಶ ನೀಡದೆ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿ ಎಂದರು.

ಸೆ.24ರಂದು ಸಿರಿಗೆರೆಯಲ್ಲಿ ಹಿರಿಯ ಜಗದ್ಗುರುಗಳ ಸಂಸ್ಮರಣಾ ಕಾರ್ಯಕ್ರಮ ಜರುಗಲಿದ್ದು ಎಲ್ಲರೂ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net