ರಕ್ತದಾನದಿಂದ ಜೀವ ಉಳಿಸಲು ಸಾಧ್ಯ

29SPT3
ಸೋಮವಾರಪೇಟೆ ಸರ್ಕಾರಿ ಸಾರ್ವಜನಿಕರ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ಮತ್ತು ರಕ್ತದಾನ ಶಿಬಿರನ್ನು ಮಾಜಿ ಸಚಿವ ಅಪ್ಪಚ್ಚು ರಂಜನ್ ಉದ್ಘಾಟಿಸಿದರು. ಜಮೀರ್, ಕರುಂಬಯ್ಯ, ಗೌತಮ್, ರಾಮಕೃಷ್ಣ ಇದ್ದರು.
Published on

ಸೋಮವಾರಪೇಟೆ: ರಕ್ತದಾನ ಪವಿತ್ರ ದಾನವಾಗಿದ್ದು, ಇದರಿಂದ ಜೀವವನ್ನು ಉಳಿಸಲು ಸಾಧ್ಯ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಎಸ್.ಸಿ. ಮೋರ್ಚಾ ವತಿಯಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಆಯೋಜಿಸಲಾಗಿದ್ದ ರಕ್ತದಾನ ಹಾಗೂ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಜನರಲ್ಲಿ ತಪ್ಪು ಕಲ್ಪನೆಯಿಂದಾಗಿ ಸಾಕಷ್ಟು ಜನರು ರಕ್ತದಾನಕ್ಕೆ ಮುಂದಾಗುತ್ತಿಲ್ಲ. ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವುದರಿಂದ ದಾನಿಗಳು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ದೇಹದಲ್ಲಿ ಹೊಸ ರಕ್ತ ಉತ್ಪಾದನೆಯಾಗುವುದರೊಂದಿಗೆ ಅನೇಕ ರೋಗಗಳಿಂದ ಪಾರಾಗಬಹುದು ಎಂದು ಅರೋಗ್ಯ ಇಲಾಖೆ ತಿಳಿಸಿದೆ. ಹಾಗಾಗಿ, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಜಮೀರ್, ಮಡಿಕೇರಿ ರಕ್ತ ನಿಧಿ ಘಟಕದ ಮುಖ್ಯಸ್ಥ ಡಾ.ಕರುಂಬಯ್ಯ, ಸೋಮವಾರಪೇಟೆ ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್, ಎಸ್.ಸಿ.ಮೋರ್ಚಾ ಅಧ್ಯಕ್ಷ ರಾಮಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net