ಜೀವ ಉಳಿಸುವ ಶ್ರೇಷ್ಠ ಕಾರ್ಯ ರಕ್ತದಾನ

blood donation camp
ಅಮೃತಮಯಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕಾರ್ಮಿಕನೊಬ್ಬ ರಕ್ತದಾನ ಮಾಡಿದರು. ಎಸ್.ರುದ್ರೇಗೌಡ, ಜಿ.ವಿಜಯಕುಮಾರ್, ಕಿರಣ್‌ಕುಮಾರ್, ಡಿ.ಜಿ.ಬೆನಕಪ್ಪ, ಡಿ.ಎಸ್.ಚಂದ್ರಶೇಖರ್, ಮಹೇಂದ್ರಪ್ಪ, ನಂದನ್ ಇದ್ದರು.
Published on

ಶಿವಮೊಗ್ಗ: ಎಲ್ಲ ದಾನಗಳಿಗಿಂತಲೂ ರಕ್ತದಾನ ಅತ್ಯಂತ ಪವಿತ್ರ ಕಾರ್ಯ. ತುರ್ತು ಸಂದರ್ಭದಲ್ಲಿ ಜೀವ ಉಳಿಸುವ ಶ್ರೇಷ್ಠ ಕಾರ್ಯ ರಕ್ತದಾನ ಎಂದು ಎಂಎಲ್‌ಸಿ ಎಸ್.ರುದ್ರೇಗೌಡ ಹೇಳಿದರು.

ಮಾಚೇನಹಳ್ಳಿ ಕೈಗಾರಿಕಾ ಅಸೋಸಿಯೇಷನ್‌ನಿಂದ ಅಮೃತಮಯಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ರಕ್ತದಾನ ಮಾಡುವುದರಿಂದ ದಾನ ಮಾಡಿದ ವ್ಯಕ್ತಿಯ ಆರೋಗ್ಯ ಸದೃಢ ಆಗುತ್ತದೆ. ರಕ್ತದಾನ ಮಾಡುವುದರಿಂದ ಶೇ. 80ರಷ್ಟು ಹೃದಯಾಘಾತದಿಂದ ಪ್ರಮಾಣ ಕಡಿಮೆ ಆಗುತ್ತದೆ ಎಂದರು.
ಮಾಚೇನಹಳ್ಳಿ ಕೈಗಾರಿಕಾ ಅಸೋಸಿಯೇಷನ್ ಅಧ್ಯಕ್ಷ ರಮೇಶ್‌ಹೆಗಡೆ ಮಾತನಾಡಿದರು. ಇದೇ ಸಂದರ್ಭದಲ್ಲಿ 120ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಮಾಚೇನಹಳ್ಳಿ ಕೈಗಾರಿಕಾ ಅಸೋಸಿಯೇಷನ್ ಕಾರ್ಯದರ್ಶಿ ಕಿರಣ್‌ಕುಮಾರ್, ಡಿ.ಜಿ.ಬೆನಕಪ್ಪ, ಡಿ.ಎಸ್.ಚಂದ್ರಶೇಖರ್, ಮಹೇಂದ್ರಪ್ಪ, ನಂದನ್, ಪ್ರವೀಣ್, ಚಂದ್ರು, ಶ್ರೀನಿವಾಸ್, ಅಶೋಕ್, ಶಾಂತಣ್ಣ, ಧರಣೇಂದ್ರ ದಿನಕರ್, ಸತೀಶ್, ಹನುಮಂತಪ್ಪ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net