ಹೃದಯಾಘಾತದಿಂದ ಬಿಎಂಟಿಸಿ ನೌಕರ ಸಾವು

deadbody
Published on

ಬೆಂಗಳೂರು: ಬಿಎಂಟಿಸಿಯ ಘಟಕ-೩೪ ರಲ್ಲಿ ಚಾಲಕ ಕಂ ನಿರ್ವಾಹಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನಯ್ಯ ಹಿರೇಮಠ್ ಅವರು ಬಿಸಿಲಿನ ತಾಪಕ್ಕೆ ಸಾವನ್ನಪ್ಪಿದ್ದಾರೆ ಎನ್ನಲಾಗಿತ್ತು. ಆದರೆ ಮಲ್ಲಿಕಾರ್ಜುನಯ್ಯ ಹಿರೇಮಠ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಬಿಎಂಟಿಸಿ ಸ್ಪಷ್ಟನೆ ನೀಡಿದೆ.
ಬೆಂ.ಮ.ಸಾ.ಸಂಸ್ಥೆಯ ಘಟಕ-೩೪ ರಲ್ಲಿ ಚಾಲಕ ಕಂ ನಿರ್ವಾಹಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನಯ್ಯ ಹಿರೇಮಠ ಬಿಸಿಲಿನ ತಾಪಕ್ಕೆ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಆದರೆ ಹೃದಯಾಘಾತದಿಂದ ಮಲ್ಲಿಕಾರ್ಜುನಯ್ಯ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿರುತ್ತಾರೆ. ಹೀಗಾಗಿ ಸಂಸ್ಥೆಯಿಂದ ನೀಡಬೇಕಾದ ಸವಲತ್ತುಗಳನ್ನು ಮೃತರ ಕುಟುಂಬಕ್ಕೆ ನೀಡಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಮಲ್ಲಿಕಾರ್ಜುನಯ್ಯ ಹಿರೇಮಠ್ ಅವರು ರಾಯಚೂರಿನ ಹಸಾನುಕಲ್ ಊರಿನವರಾಗಿದ್ದು ಶುಕ್ರವಾರ ಮೃತಪಟ್ಟಿದ್ದರು. ಮೃತರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net