BMTC ಬಸ್ ಚಲಾಯಿಸುತ್ತಿರುವಾಗಲೇ ಡ್ರೈವರ್​ ಹೃದಯಾಘಾತದಿಂದ ಸಾವು

BMTC BUS ACCIDENT
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: ( BMTC ) ಬಿಎಂಟಿಸಿ  ಬಸ್​ ಚಲಾಯಿಸುತ್ತಿರುವಾಗಲೇ  ಹೃದಯಾಘಾತದಿಂದ ಡ್ರೈವರ್ ಸಾವನ್ನಪ್ಪಿರುವ ಘಟನೆ ಯಶವಂತಪುರ ಬಳಿ ನಡೆದಿದೆ.

ಬಿಎಂಟಿಸಿ ಡಿಪೋ 40ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಿರಣ್ (39) ಮೃತಪಟ್ಟ ಡ್ರೈವರ್. ಹೃದಯಾಘಾತದಿಂದ ಡ್ರೈವರ್ ಸಾವನ್ನಪ್ಪಿದ್ದಾರೆ. ಈ ವೇಳೆ  ಬಿಎಂಟಿಸಿ ಬಸ್​ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ.

ನೆಲಮಂಗಲ ಕಡೆಯಿಂದ ಯಶವಂತಪುರ ಕಡೆಗೆ ಬಿಎಂಟಿಸಿ ಬಸ್ ಅನ್ನು ಚಾಲನೆ ಮಾಡಿಕೊಂಡು ಬರುವಾಗ ಡ್ರೈವರ್​ಗೆ ಎದೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ತಕ್ಷಣವೇ ಬಸ್ ನಿಲ್ಲಿಸಿದ್ದನು.

ಎದೆನೋವು ತೀವ್ರವಾಗಿ ಕಾಣಿಸಿಕೊಂಡು ಹೃದಯಾಘಾತದಿಂದ ಡ್ರೈವರ್ ಸಾವನ್ನಪ್ಪಿದ್ದಾನೆ. ಬಸ್​ನಲ್ಲಿದ್ದ ಪ್ರಯಾಣಿಕರಿಗರಿಗೆ ಯಾವುದೇ ತೊಂದರೆಯಾಗಿಲ್ಲ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net