

ಉತ್ತರಕನ್ನಡ: ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬಂದರಿನಲ್ಲಿ ನಿಲ್ಲಿಸಿದ್ದ ಬೋಟ್ನಲ್ಲಿ ಆಕಸ್ಮಿಕ ಅಗ್ನಿ ಕಾಣಿಸಿಕೊಂಡ ಪರಿಣಾಮ ಭಾಗಶಃ ಸುಟ್ಟು ಹೋಗಿದ್ದು, ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕ ದಳ ಯಶಸ್ವಿಯಾಗಿದೆ.
ಭಟ್ಕಳ ಮೀನುಗಾರಿಕೆ ಬಂದರಿನಲ್ಲಿ ಈ ಘಟನೆ ಸಂಭವಿಸಿದ್ದು, ಬಿಸಿಲಿನ ತಾಪಕ್ಕೆ ಬೋಟ್ನಲ್ಲಿ ಬೆಂಕಿ ಆವರಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಬೋಟ್ ಹೊತ್ತಿ ಉರಿದಿದ್ದು, ಸ್ಥಳಕ್ಕೆ ಆಗಮಿಸಿದ ಪರ್ಶಿಯನ್ ಬೋಟ್ ಯುನಿಯನ್, ಧರ್ಮಸ್ಥಳ ಶೌರ್ಯ ತಂಡದ ಸಹಕಾರ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.
ಬೋಟ್ ನರಸಿಂಹ ಗೋವಿಂದ ಖಾರ್ವಿ ಎಂಬುವವರಿಗೆ ಸೇರಿದ್ದು, ಕಳೆದ ಮೂರು ವರ್ಷದಿಂದ ಬಂದರು ಮೇಲ್ಭಾಗದಲ್ಲಿ ಇರಿಸಲಾಗಿತ್ತು. ಬೋಟ್ ದುರಸ್ಥಿ ಮಾಡಲು ಬಂದರಿನಲ್ಲಿ ಇರಿಸಲಾಗಿತ್ತು ಎಂದು ವರದಿ ತಿಳಿಸಿದೆ.