ಬಿಕಿನಿ ಫೋಟೋ ಹಂಚಿಕೊಂಡು ಪಡ್ಡೆಗಳ ನಿದ್ದೆ ಕೆಡಿಸಿದ ಡಿಪ್ಪಿ

deepika (1)
Published on

ಮುಂಬೈ: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮತ್ತೊಮ್ಮೆ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದು, ಅವರ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಇತ್ತೀಚೆಗಷ್ಟೇ ಪಠಾಣ್ ಸಿನಿಮಾದ ಹಾಡಿಗೆ ಬಿಕಿನಿಯಲ್ಲಿ ಕಾಣಿಸಿಕೊಂಡು ಅಭಿಮಾನಿಗಳನ್ನು ರಂಜಿಸಿದ ಈ ಚೆಲುವೆ ಇತ್ತೀಚೆಗೆ ಮತ್ತೊಮ್ಮೆ ಗ್ಲಾಮರ್ ಆಗಿ ಕಾಣಿಸಿಕೊಂಡಿದ್ದಾರೆ.

ಆಕೆಯ ಇತ್ತೀಚಿನ ಬಿಕಿನಿ ಲುಕ್ ನೋಡಿ ಪಡ್ಡೆಗಳ ನಿದ್ದೆ ಹಾರಿದೆ. ಅಂದಹಾಗೆ ಸೋಮವಾರ ಸಂಜೆ ದೀಪಿಕಾ ಈ ಫೋಟೋವನ್ನು ಇನ್ಸ್ಟಾಗ್ರಾಮ್​​​​​ನಲ್ಲಿ ಹಂಚಿಕೊಂಡಿದ್ದು, "Once upon a time…Not so long ago" ಎಂಬ ಶೀರ್ಷಿಕೆಯೊಂದಿಗೆ ಈ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಈ ಫೋಟೋಗೆ ಆಕೆಯ ಪತಿ, ಬಾಲಿವುಡ್ ನಟ ರಣವೀರ್ ಸಿಂಗ್ ಕೂಡ ಪ್ರತಿಕ್ರಿಯಿಸಿದ್ದಾರೆ. "ಮೊದಲೇ ಎಚ್ಚರಿಕೆ ನೀಡಿದ್ದರೆ ಚೆನ್ನಾಗಿರುತ್ತಿತ್ತು'' ಎಂದು ಪ್ರತಿಕ್ರಿಯಿಸಿದ್ದಾರೆ. ಮತ್ತೊರ್ವ ಬಾಲಿವುಡ್ ನಟಿ ಭೂಮಿ ಪಡ್ನೇಕರ್ ದೀಪಿಕಾ ಫೋಟೋಗೆ ಫೈಯರ್ ಇಮೋಜಿಗಳೊಂದಿಗೆ ಕಾಮೆಂಟ್ ಮಾಡಿದ್ದಾರೆ.

ಈ ಫೋಟೋ ಚಿತ್ರೀಕರಣದ ಭಾಗವಾಗಿ ತೆಗೆದಂತಿದೆ. ಇದೀಗ ಫೋಟೋ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಪಠಾಣ್ ಸಿನಿಮಾದ ಬೇಷರಂ ರಂಗ್ ಹಾಡಿನಲ್ಲಿ ದೀಪಿಕಾ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದು ಗೊತ್ತೇ ಇದೆ. ಆಕೆಯ ಕೇಸರಿ ಬಣ್ಣದ ಬಿಕಿನಿಯು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಈ ಬಗ್ಗೆ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಆದರೆ ದೀಪಿಕಾ ಪಡುಕೋಣೆ ಬೋಲ್ಡ್ ಲುಕ್‌ಗೆ ಅಭಿಮಾನಿಗಳು ನೂರು ಅಂಕ ನೀಡಿದ್ದರು. ಈ ಥ್ರಿಲ್ಲರ್ ಚಿತ್ರವು Rs1200 ಕೋಟಿಗಟ್ಟಲೇ ಬಾಚುವುದರೊಂದಿಗೆ ಶಾರುಖ್ ಅವರ ವೃತ್ತಿಜೀವನದ ಹಿಟ್ ಚಿತ್ರಗಳಲ್ಲಿ ಒಂದಾಯಿತು. ಪ್ರಸ್ತುತ ದೀಪಿಕಾ ಪಡುಕೋಣೆ ಪ್ರಭಾಸ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಕಲ್ಕಿ 2898 ಡಿ ಚಿತ್ರದಲ್ಲಿ ಚಿತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net