

ಮುಂಬೈ: ಬಾಲಿವುಡ್ ಹಾಟ್ ಬೆಡಗಿ ನಟಿ ಜಾನ್ವಿ ಕಪೂರ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಕ್ಷಿಣ ಮುಂಬೈನ ಆಸ್ಪತ್ರೆಗೆ ಬಾಲಿವುಡ್ ನಟಿ ದಾಖಲಾಗಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ ನಟಿಗೆ ಫುಡ್ ಪಾಯಿಸನ್ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರಂತೆ. ಈ ಸುದ್ದಿಯನ್ನು ಜಾನ್ವಿ ಕಪೂರ್ ಅವರ ತಂದೆ ಬೋನಿ ಕಪೂರ್ ಖಚಿತಪಡಿಸಿದ್ದಾರೆ.
ಅನಾರೋಗ್ಯದ ಕಾರಣ ನಟಿ ತಮ್ಮ ಎಲ್ಲಾ ಶೂಟಿಂಗ್, ಭೇಟಿಯನ್ನು ರದ್ದುಗೊಳಿಸಿದ್ದಾರೆ. ಜಾನ್ವಿ ಕಪೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆಯ ಆರೋಗ್ಯ ಸುಧಾರಿಸಿದೆ. ಜಾನ್ವಿ ಶುಕ್ರವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಾನ್ವಿ ಕಪೂರ್ ಕಳೆದ ಕೆಲವು ತಿಂಗಳುಗಳಿಂದ ಬ್ಯುಸಿಯಾಗಿದ್ದಾರೆ. ಅವರ ಮಿಸ್ಟರ್ ಅಂಡ್ ಮಿಸೆಸ್ ಮಹಿ ಚಿತ್ರ ಬಿಡುಗಡೆಯಾಯಿತು. ಇತ್ತೀಚೆಗೆ ಅವರು ಉದ್ಯಮಿ ಅನಂತ್ ಮತ್ತು ರಾಧಿಕಾ ಅವರ ವಿವಾಹದ ಸಮಾರಂಭದಲ್ಲಿ ಕಾಣಿಸಿಕೊಂಡರು. ಬಳಿಕ ಜುಲೈ 15 ರಂದು ಉಲ್ಜ್ ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲೂ ಕಾಣಿಸಿಕೊಂಡಿದ್ದರು ಎನ್ನಲಾಗಿದೆ.