ಕೇಂದ್ರ ಗೃಹ ಸಚಿವಾಲಯಕ್ಕೆ ಬಾಂಬ್​ ಬೆದರಿಕೆ; ದೆಹಲಿ ಪೊಲೀಸರಿಂದ ಪರಿಶೀಲನೆ

delhi
Published on

ನವದೆಹಲಿ: ನಾಲ್ಕು ತಿಂಗಳ ಅವಧಿಯಲ್ಲಿ ಬೆಂಗಳೂರು, ದೆಹಲಿಯ ನೂರಾರು ಶಾಲೆಗಳು ಮತ್ತು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದ ಬೆನ್ನೆಲ್ಲೇ ಇದೀಗ ಕೇಂದ್ರ ಗೃಹ ಸಚಿವಾಲಯದ ಕಚೇರಿ ಇರುವ ನಾರ್ತ್ ಬ್ಲಾಕ್‌ಗೆ ಬಾಂಬ್ ಬೆದರಿಕೆ ಬಂದಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ದೆಹಲಿಯ ನಾರ್ತ್ ಬ್ಲಾಕ್‌ನಲ್ಲಿರುವ ಪೊಲೀಸ್ ಕಂಟ್ರೋಲ್ ರೂಮ್‌ನಿಂದ ಬಾಂಬ್ ಬೆದರಿಕೆ ಮೇಲ್ ಬಂದಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ (ಡಿಎಫ್‌ಎಸ್) ತಿಳಿಸಿದ್ದಾರೆ. ಬುಧವಾರ ಮಧ್ಯಾಹ್ನ 3.30ರ ಸುಮಾರಿಗೆ ಬೆದರಿಕೆ ಮೇಲ್ ಬಂದ ನಂತರ ಅನುಮಾದಡಿ ಪೊಲೀಸರು ಸಂಪೂರ್ಣ ಪರಿಶೀಲನೆ ನಡೆಸುತ್ತಿದ್ದಾರೆ, ಈ ವೇಳೆ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.

ನಕಲಿ ಇ ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ. IP ವಿಳಾಸ ಮತ್ತು ಇಮೇಲ್‌ನ ಮೂಲದ ಸ್ಥಳವನ್ನು ಇನ್ನೂ ಪತ್ತೆಹಚ್ಚಿಲ್ಲ. ಸ್ನಿಫರ್ ಡಾಗ್ಸ್ ಮತ್ತು ಬಾಂಬ್ ಸ್ಕ್ವಾಡ್ ಮತ್ತು ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ನಾರ್ತ್ ಬ್ಲಾಕ್‌ನಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಶಾಲೆಗಳು, ಆಸ್ಪತ್ರೆಗಳು, ವಿಮಾನ ನಿಲ್ದಾಣಗಳು ಮತ್ತು ಸರ್ಕಾರಿ ಕಟ್ಟಡಗಳು ಸೇರಿದಂತೆ ಹಲವು ಸಂಸ್ಥೆಗಳು ಕಳೆದ ನಾಲ್ಕು ತಿಂಗಳಿನಿಂದ ಹಲವು ಬಾರಿ ಬೆದರಿಕೆ ಇ-ಮೇಲ್‌ಗಳ ಬಂದ ಹಿನ್ನೆಲೆ ನಂತರ ಇದೀಗ ಕೇಂದ್ರ ಸಚಿವಾಲಯಕ್ಕೆ ಬೆದರಿಕೆ ಕರೆ ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net