BSY ಅವರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್ : CM Siddaramaiah

CM Siddaramaiah
Published on

ಶಿಗ್ಗಾಂವಿ: ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲಾನ್ ಮಾಡಿದ್ದರು. ಅದಕ್ಕೆ ಜತೆಯಲ್ಲಿದ್ದೇ BSYಗೆ ಟಾಂಗ್ ಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ವ್ಯಂಗ್ಯವಾಡಿದರು.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಚಂದಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಗೆಲುವಿಗೆ ಪ್ರಚಾರ ಕೈಗೊಂಡು ಮಾತನಾಡಿದರು. ಮೋದಿ ಮಹಾನ್ ಸುಳ್ಳುಗಾರ ಎಂದು ಕುಮಾರಸ್ವಾಮಿ ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಎಂದು ದೇವೇಗೌಡರು ಹೇಳಿದ್ದರು. ಈಗ ಇಬ್ಬರೂ ಮೃತ್ರಿ ಆಗಿದ್ದಾರೆ ಎಂದರು.

ಇಲ್ಲಿನ‌ ಬಿಜೆಪಿ ಅಭ್ಯರ್ಥಿ ಅತ್ಯಂತ ಶ್ರೀಮಂತ ಕುಟುಂಬದಿಂದ ಬಂದವರು. ಅವರಿಗೆ ಹಳ್ಳಿ ಬದುಕು ಗೊತ್ತಿಲ್ಲ. ಬಡವರ ಬದುಕು ಗೊತ್ತಿಲ್ಲ. ಆದರೆ ಕಾಂಗ್ರೆಸ್ ಅಭ್ಯರ್ಥಿ ಅತ್ಯಂತ ಸಾಮಾನ್ಯ ಕುಟುಂಬದಿಂದ ಬಂದು ಬಡವರ ಕಷ್ಟ, ಸುಖ ಗೊತ್ತಿರುವವರು‌. ಇವರನ್ನು ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ಆಗುತ್ತದೆ

ನರೇಂದ್ರ ಮೋದಿ ಕುಟುಂಬ ರಾಜಕಾರಣದ ಬಗ್ಗೆ ಭರ್ಜರಿ ಭಾಷಣ ಮಾಡ್ತಾರೆ. ಆದರೆ ಇಲ್ಲಿ ಮಾಜಿ ಮುಖ್ಯಮಂತ್ರಿಯ ಮೊಮ್ಮಗ, ಮಾಜಿ ಮುಖ್ಯಮಂತ್ರಿಯ ಮಗನಿಗೆ ಟಿಕೆಟ್ ನೀಡಿದ್ದಾರೆ. ಇದು ಕುಟುಂಬ ರಾಜಕಾರಣ ಅಲ್ಲವೇ ಮೋದಿ ಯವರೇ? ಎಂದು ಕಿಡಿಕಾರಿದರು.

ನಾನು ನಾಡಿನ ಜನತೆಯ ಪ್ರೀತಿ, ಆಗ್ರಹಗಳಿಗೆ ಬಗ್ಗುತ್ತೇನೆಯೇ ಹೊರತು, ಬಿಜೆಪಿ ಮತ್ತು ದೇವೇಗೌಡರ ಷಡ್ಯಂತ್ರಗಳಿಗೆ ಬಗ್ಗದೂ ಇಲ್ಲ. ಜಗ್ಗದೂ ಇಲ್ಲ. ಎಲ್ಲಿಯವರೆಗೂ ರಾಜ್ಯದ ಜನರ ಆಶೀರ್ವಾದ ಇರುತ್ತದೋ ಅಲ್ಲಿಯವರೆಗೂ ನಾನು ಬಿಜೆಪಿ ಕುತಂತ್ರಗಳಿಗೆ ಬಗ್ಗುವುದಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net