ಕನ್ನಡದಲ್ಲೇ ಮಾತನಾಡಿದ ರಜನಿ, ಜೂ.ಎನ್​ಟಿಆರ್; ಕಾರ್ಯಕ್ರಮಕ್ಕೆ ಆಗಮಿಸಿದ್ದಕ್ಕೆ ಧನ್ಯವಾದ ಹೇಳಿದ ಸಿಎಂ

Karnataka Ratna
Published on

ಬೆಂಗಳೂರು: ನಟ ಪುನೀತ್ ರಾಜ್​ಕುಮಾರ್ ಅವರಿಗೆ ರಾಜ್ಯೋತ್ಸವದಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನವಾಗಿದೆ. ಪ್ರಶಸ್ತಿ ಪ್ರದಾನ ಮಾಡಲು ತಮಿಳಿನ ಸೂಪರ್​ಸ್ಟಾರ್ ರಜಿನಿಕಾಂತ್ ಹಾಗೂ ನಟ ಜೂನಿಯರ್ ಎನ್​ಟಿಆರ್ ಆಗಮಿಸಿದ್ದರು.

ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮುಗಿಯುತ್ತಿದ್ದಂತೆ ರಜನಿಕಾಂತ್ ಹಾಗೂ ಜೂನಿಯರ್ ಎನ್​ಟಿಆರ್ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಅವರ ನಿವಾಸಕ್ಕೆ ತೆರಳಿದ್ದರು. ಇದೀಗ ಅವರ ನಿವಾಸದಲ್ಲಿ ಬೊಮ್ಮಾಯಿ ನಟರಿಬ್ಬರನ್ನು ಸನ್ಮಾನಿಸಿದ್ದಾರೆ.

ನಮ್ಮ ಪ್ರೀತಿಯ ಕರೆಗೆ ಓಗೊಟ್ಟು, 'ಕರ್ನಾಟಕ ರತ್ನ' ಪ್ರಶಸ್ತಿ ಪ್ರದಾನ ಮಾಡಲು ಕರ್ನಾಟಕ್ಕೆ ಆಗಮಿಸಿದ್ದೀರಿ. ಕಾರ್ಯಕ್ರಮದಲ್ಲಿ ಕನ್ನಡದಲ್ಲಿಯೇ ಮಾತನಾಡಿ, ಕನ್ನಡದ ಪ್ರೀತಿ ತೋರಿಸಿದ್ದೀರಿ. ರಜನಿಕಾಂತ್ ಹಾಗೂ ಜೂನಿಯರ್ ಎನ್​ಟಿಆರ್ ಅವರಿಗೆ ನನ್ನ ಧನ್ಯವಾದಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net