ಸಿಎಂ ಬಸವರಾಜ ಬೊಮ್ಮಾಯಿ: ಇಂದೇ ಹಕ್ಕುಮಂಡನೆ, ನಾಳೆ ಮಧ್ಯಾಹ್ನ ಪ್ರಮಾಣವಚನ ಸ್ವೀಕಾರ..

Bommai F
Published on

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದ ಬೆಳವಣಿಗೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದು, ಅವರು ನಾಳೆ ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಘೋಷಿಸಲಾಗಿದ್ದು, ಆರ್​. ಅಶೋಕ್​, ಗೋವಿಂದ ಕಾರಜೋಳ ಬೊಮ್ಮಾಯಿ ಹೆಸರನ್ನು ಅನುಮೋದಿಸಿದರು. ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಬೊಮ್ಮಾಯಿ ಆಯ್ಕೆ ಆಗಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಇಂದೇ ರಾಜಭವನಕ್ಕೆ ಹೋಗಿ ಸರ್ಕಾರ ರಚನೆಗೆ ಹಕ್ಕುಮಂಡನೆ ಮಾಡಲಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net