ಪತಿ ಬಸವರಾಜ ಬೊಮ್ಮಾಯಿ ಗೆಲ್ಲಿಸುವಂತೆ ಪತ್ನಿ ಚೆನ್ನಮ್ಮ ಮತಯಾಚನೆ

15-RNR-03
Published on

ರಾಣೆಬೆನ್ನೂರ: ದೇಶದಲ್ಲಿ ಸುಭದ್ರ ಆಡಳಿತ ನಡೆಸಲು ಬಿಜೆಪಿಯಿಂದ ಮಾತ್ರ ಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಕೇಂದ್ರದಲ್ಲಿ ಬಿಜೆಪಿ ಪಕ್ಷ ಆಡಳಿತಕ್ಕೆ ತರಲು ಬಿಜೆಪಿ ಅಭ್ಯರ್ಥಿಗೆ ಮತ ನೀಡುವ ಮೂಲಕ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು ಎಂದು ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪತ್ನಿ ಚೆನ್ನಮ್ಮ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಸೋಮವಾರ ಮನೆ ಮನೆಗೆ ತೆರಳಿ ಬಿಜೆಪಿ ಪರ ಪ್ರಚಾರ ಹಾಗೂ ಬಸವರಾಜ ಬೊಮ್ಮಾಯಿ ಪರ ಮತಯಾಚನೆ ಮಾಡಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ಮಹಿಳೆಯರಿಗಾಗಿ ಉಜ್ವಲ ಯೋಜನೆ, ಸುಕನ್ಯ ಸಮೃದ್ಧಿ ಯೋಜನೆ ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಮುಂದಿನ ದಿನದಲ್ಲಿ ಇನ್ನೂ ಅನೇಕ ಅಭಿವೃದ್ಧಿ ಕಾರ್ಯಗಳ ಜತೆಗೆ ದೇಶದ ಭದ್ರತೆ ಕೂಡ ಹೆಚ್ಚಿಸಲಿದ್ದಾರೆ. ಆದ್ದರಿಂದ ಪ್ರತಿಯೊಬ್ಬರೂ ಬಿಜೆಪಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶೋಭಾ ನಿಸ್ಸಿಮಗೌಡ್ರ, ಭಾರತಿ ಜಂಬಗಿ ಹಾಗೂ ಪಕ್ಷದ ಮಹಿಳಾ ಪ್ರಮುಖರು, ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net