ಶೇ.50% ರಿಯಾಯಿತಿ ದರಗಳಲ್ಲಿ ಪುಸ್ತಕ ಮಾರಾಟ

book
Published on

 ಮೈಸೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಆಗಸ್ಟ್ ತಿಂಗಳ ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತಿದೆ.

 ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ರಿಯಾಯಿತಿ ಸೌಲಭ್ಯ ದೊರೆಯಲಿದೆ.

 ಕನ್ನಡ ಪುಸ್ತಕ ಪ್ರಾಧಿಕಾರದ https://kpp.karnataka.gov.in ವೆಬ್‌ ಸೈಟ್‌ ನಲ್ಲಿಯೂ ಶೇ.50 ರಿಯಾಯಿತಿಯಲ್ಲಿ ಲಭ್ಯವಿದ್ದು, ಆಸಕ್ತರು ಪುಸ್ತಕವನ್ನು ಖರೀದಿ ಮಾಡಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಯಾದ ಕೆ.ಬಿ ಕಿರಣ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net