ಎರಡು ವರ್ಷದ ದ್ವೇಷ; 58 ವರ್ಷದ ಮಹಿಳೆಯನ್ನು ಅಪಚಾರಗೊಳಿಸಿ ಹತ್ಯೆ ಮಾಡಿದ 16ರ ಬಾಲಕ!

Police
Published on

ಮಧ್ಯಪ್ರದೇಶ: 16 ವರ್ಷದ ಬಾಲಕನೊಬ್ಬ 58 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ನಂತರ ಆಕೆಯ ಬಾಯಿಯನ್ನು ಬಿಗಿದು, ದೊಣ್ಣೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದಾನೆ. ಹನುಮಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೈಲಾಸಪುರಿ ಗ್ರಾಮದಲ್ಲಿ ಕಳೆದ ಜನವರಿ 30 ರಂದು ರಾತ್ರಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಬಾಲಕ ಮಹಿಳೆಯ ಬಾಯಿಗೆ ಪ್ಲಾಸ್ಟಿಕ್ ಚೀಲ ಮತ್ತು ಬಟ್ಟೆಯನ್ನು ತುಂಬಿಸಿ, ಆಕೆ ವಾಸವಿದ್ದ ಕಟ್ಟಡದ ನಿರ್ಮಾಣ ಹಂತದ ಭಾಗಕ್ಕೆ ಎಳೆದೊಯ್ದು ಈ ಕೃತ್ಯ ಎಸಗಿದ್ದಾನೆ. ನಂತರ ಆಕೆಯ ತಲೆ ಮತ್ತು ಖಾಸಗಿ ಭಾಗಕ್ಕೆ ಕೋಲಿನಿಂದ ಹೊಡೆದು ಗಾಯಗೊಳಿಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಬಾಲಕ ಮೊಬೈಲ್ ಫೋನ್​ ಒಂದನ್ನು ಕಳ್ಳತನ ನಡೆಸಿದ್ದ. ಈ ವೇಳೆ ಹತ್ಯೆಗೀಡಾದ ಮಹಿಳೆಯ ಮನೆಯವರು ಬಾಲಕನ ವಿರುದ್ಧ ಕಳ್ಳತನ ಆರೋಪ ಮಾಡಿದ್ದರು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಬಾಲಕ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿವೇಕ್ ಲಾಲ್ ಪ್ರತಿಕ್ರಿಯಿಸಿ, ಫೆಬ್ರವರಿ 1 ರಂದು 58 ವರ್ಷ ಆಸುಪಾಸಿನ ಮಹಿಳೆಯ ಮೃತದೇಹ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಬಿದ್ದಿದೆ ಎಂದು ಮಾಹಿತಿ ಬಂದಿದೆ. ಕೂಡಲೇ ಬೆರಳಚ್ಚು ತಂಡದೊಂದಿಗೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಆರಂಭದಲ್ಲಿ ಅಪರಿಚಿತ ವ್ಯಕ್ತಿಗಳು ಮಹಿಳೆಯನ್ನು ಹತ್ಯೆ ಮಾಡಿದ್ದಾರೆ ಎಂದು ಅಂದಾಜಿಸಲಾಗಿತ್ತು. ಘಟನಾ ಸ್ಥಳದಲ್ಲಿ ಲಭ್ಯವಾದ ಸುಳಿವು ಮತ್ತು ತನಿಖೆಯಿಂದ ಆಕೆಯ ನೆರೆಹೊರೆಯಲ್ಲಿ ವಾಸಿಸುವ ಹುಡುಗ ಈ ಕೃತ್ಯ ಎಸಗಿದ್ದಾನೆ ಎಂಬುದು ಖಚಿತವಾಗಿದೆ ಎಂದು ತಿಳಿಸಿದ್ದಾರೆ.

ಮೃತ ಮಹಿಳೆಯ ಮನೆಯವರನ್ನು ವಿಚಾರಿಸಿದಾಗ ಎರಡು ವರ್ಷಗಳ ಹಿಂದೆ ಬಾಲಕ ನಮ್ಮ ಮನೆಗೆ ಟಿವಿ ನೋಡಲು ಬರುತ್ತಿದ್ದ. ಈ ವೇಳೆ ಮನೆಯಲ್ಲಿದ್ದ ಮೊಬೈಲ್ ಕಳ್ಳತನ ನಡೆಸಿದ್ದ ಎಂದು ಹೇಳಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದ್ವೇಷ ತೀರಿಸಿಕೊಳ್ಳಲು ಬಾಲಕ ಅತ್ಯಾಚರವೆಸಗಿ ಹತ್ಯೆ ಮಾಡಿದ್ದು, ನಂತರ ಮಹಿಳೆಯ ಮನೆಯಲ್ಲಿದ್ದ 1000 ರೂ ಹಾಗೂ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದಾನೆ. ಸದ್ಯ ಬಾಲಕನ್ನು ಪತ್ತೆ ಮಾಡಿ ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಅಪರಾಧ ಎಸಗಿರುವುದನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net