

ರಾಮನಗರ: ಈಜುಕೊಳದಲ್ಲಿ ಈಜಲು ಹೋದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹಾರೋಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮಲ್ಲಿಗೆ ಮೆಟ್ಟಿಲು ಗ್ರಾಮದಲ್ಲಿ ಸಂಭವಿಸಿದೆ.
ತಾಲೂಕಿನ ಮಲ್ಲಿಗೆ ಮೆಟ್ಟಿಲು ಗ್ರಾಮದ ಸಿದ್ದರಾಜು ಎಂಬುವರ ಮಗ ಅರುಣ್ (13) ಮೃತಪಟ್ಟ ದುರ್ದೈವಿ.
ಸರ್ಕಾರಿ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ ಈತ ಬುಧವಾರ ಮಧ್ಯಾಹ್ನ ಗ್ರಾಮದ ಹೊರ ವಲಯದಲ್ಲಿರುವ ಫಾರಂ ಹೌಸ್ ನ ಈಜುಕೊಳದಲ್ಲಿ ಈಜಲು ಹೋಗಿ ಮುಳುಗಿ ಮೃತಪಟ್ಟಿದ್ದಾನೆ.
ವಿಷಯ ತಿಳಿದ ಹಾರೋಹಳ್ಳಿ ಪೊಲೀಸರು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಪಾಲಕರಿಗೆ ನೀಡಿದ್ದಾರೆ.