ಶಿಡ್ಲಟ್ಟ: ನಗರದ ನೆಹರು ಕ್ರೀಡಾಂಗಣದಲ್ಲಿ ಬೀದಿ ನಾಯಿ ದಾಳಿಯಿಂದ 13 ವರ್ಷದ ಬಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ. ಚರಣ್ (13) ಎಂಬ ಬಾಲಕ ಸೋಮವಾರ ಕ್ರೀಡಾಂಗಣದಲ್ಲಿ ಆಟವಾಡುತ್ತಿದ್ದಾಗ, 15ಕ್ಕೂ ಹೆಚ್ಚು ಬೀದಿ ನಾಯಿಗಳ ಹಿಂಡು ಆತನ ಮೇಲೆ ದಾಳಿ ಮಾಡಿದ್ದು, ಕಾಲು, ಕೈ ಮತ್ತು ಬೆನ್ನಿನ ಭಾಗವನ್ನು ಕಚ್ಚಿ ಗಾಯಗೊಳಿಸಿವೆ.ಬಾಲಕನ ಕಿರುಚಾಟ ಕೇಳಿ ಕ್ರೀಡಾಂಗಣದಲ್ಲಿ ಆಡುತ್ತಿದ್ದ ಯುವಕರು ಧಾವಿಸಿ ನಾಯಿಗಳನ್ನು ಓಡಿಸಿ ಬಾಲಕನನ್ನು ರಸಿದ್ದಾರೆ. ಶಿಡ್ಲಟ್ಟ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.ನಗರಸಭೆ ಪೌರಾಯುಕ್ತೆ ಜಿ.ಅಮೃತಾ ಆಸ್ಪತ್ರೆಗೆ ಭೇಟಿ ನೀಡಿ ಬಾಲಕನ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿ, ನಗರದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ನಿಯಂತ್ರಣಕ್ಕೆ ಈಗಾಗಲೇ ಟೆಂಡರ್ ಕರೆದಿದ್ದು, ಶ್ರೀದಲ್ಲೇ ಕ್ರಮ ಜರುಗಿಸಲಾಗುತ್ತದೆ ಎಂದು ಭರವಸೆ ನೀಡಿದರು.