ಮಹಿಳೆಯರ ಒಳಉಡುಪು ಧರಿಸಿ ಜನನಿಬಿಡ ರಸ್ತೆಯಲ್ಲಿ Reels; ಸ್ಥಳೀಯರು ಮಾಡಿದ್ದೇನು ನೀವೇ ನೋಡಿ

Reels
Published on

ಪಾಣಿಪತ್​: ಇತ್ತೀಚಿನ ದಿನಗಳಲ್ಲಿ ರೀಲ್ಸ್​ (Reels) ಸಂಬಂಧಿತ ಅವಘಡಗಳು ಹೆಚ್ಚಾಗುತ್ತಿದ್ದು, ಜನರು ಒಂದಿಲ್ಲೊಂದು ಸಮಸ್ಯೆಗಳನ್ನು ತಂದುಕೊಳ್ಳುತ್ತಿದ್ದಾರೆ. ಅನೇಕ ಬಾರಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇದೀಗ ಹರಿಯಾಣದ ಪಾಣಿಪತ್​ನಲ್ಲಿ ವ್ಯಕ್ತಿಯೊಬ್ಬ ಮಹಿಳೆಯರ ಒಳಉಡುಪು ಧರಿಸಿ ರೀಲ್ಸ್ (Reels) ಮಾಡಲು ಹೋಗಿ ಜನರಿಂದ ಹಿಗ್ಗಾಮುಗ್ಗಾ ಥಳಿತಕ್ಕೆ ಒಳಗಾಗಿರುವ ಘಟನೆ ಬೆಳಕಿಗೆ ಬಂದಿದೆ. 

ಪಾಣಿಪತ್​ನ ಇನ್ಸಾರ್​ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದ್ದು, ಜನರು ವ್ಯಕ್ತಿಯನ್ನು ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಆದರೆ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ವ್ಯಕ್ತಿಗೆ ಇನ್ಸಾರ್​ ಮಾರುಕಟ್ಟೆಯಲ್ಲಿರುವ ಅಂಗಡಿ ಮಾಲೀಕರು ಹಾಗೂ ಸ್ಥಳೀಯರು ಚಪ್ಪಲಿ ಹಾಗೂ ಇನ್ನಿತರೆ ವಸ್ತುಗಳಿಂದ ಹಲ್ಲೆ ಮಾಡುತ್ತಿರುವುದನ್ನು ನೋಡಬಹುದಾಗಿದೆ. ವ್ಯಕ್ತಿ ಕ್ಷಮೆಯಾಚಿಸಿ ತನ್ನನ್ನು ಬಿಟ್ಟುಬಿಡುವಂತೆ ಮನವಿ ಮಾಡುವುದನ್ನು ವೈರಲ್​ ವಿಡಿಯೋದಲ್ಲಿ ನೋಡಬಹುದಾಗಿದೆ. ಸದ್ಯ ಈ ವಿಡಿಯೋ ಸಖತ್​ ವೈರಲ್​ ಆಗಿದ್ದು, ವ್ಯಕ್ತಿಯ ನಡೆ ವ್ಯಾಪಕ ಖಂಡನೆಗೆ ಗುರಿಯಾಗಿದೆ.

ಘಟನೆಯ ಕುರಿತು ಮಾಹಿತಿ ನೀಡಿರುವ ಪೊಲೀಸ್​ ಅಧಿಕಾರಿಯೊಬ್ಬರು, ಜನನಿಬಿಡ ಮಾರುಕಟ್ಟೆಯಲ್ಲಿ ವ್ಯಕ್ತಿಯೋರ್ವ ಮಹಿಳೆಯರ ಒಳುಡುಪು ಧರಿಸಿ ರೀಲ್ಸ್​ (Reels) ಮಾಡಲು ಶುರು ಮಾಡಿದ್ದಾನೆ. ಇದನ್ನು ಗಮನಿಸಿದ ಮಹಿಳೆಯರು ಆತನಿಗೆ ನಿಲ್ಲಿಸುವಂತೆ ಸೂಚಿಸಿದ್ದಾರೆ. ಈ ವೇಳೆ ಯುವಕ ಹಾಗೂ ಅಲ್ಲಿದ್ದವರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಅಂಗಡಿ ಮಾಲೀಕರು ಆತನನ್ನು ಥಳಿಸಿ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ವೈರಲ್​ ವಿಡಿಯೋ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net