

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರು ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಜಯನಗರದ ಅಪೊಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೇಲೂರು ತಾಲೂಕು ಬಳ್ಳೂರಿನಲ್ಲಿ ಮಂಗಳವಾರ ಉಸಿರಾಟದ ಸಮಸ್ಯೆ ತೀವ್ರವಾಗಿ ಕಾಡಿದ್ದರಿಂದ ಆಂಬ್ಯುಲೆನ್ಸ್‌ನಲ್ಲಿ ಬೆಂಗಳೂರಿಗೆ ಕರೆತಂದು ಆಸ್ಪತ್ರೆಗೆ ಸೇರಿಸಲಾಗಿದೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅವರ ದತ್ತು ಪುತ್ರ ಬಳ್ಳೂರು ಉಮೇಶ್ ವಿಜಯವಾಣಿಗೆ ತಿಳಿಸಿದ್ದಾರೆ.
ಕಳೆದ ಎರಡು ತಿಂಗಳ ಹಿಂದೆಯಷ್ಟೆ ಬೆಂಗಳೂರು ಬಾಡಿಗೆ ಮನೆಯಲ್ಲಿ ಜಾರಿ ಬಿದ್ದುಬೆನ್ನುಮೂಳೆಗೆ ಗಾಯ ಮಾಡಿಕೊಂಡಿದ್ದ ತಿಮ್ಮಕ್ಕ ಸುಧಾರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿಯೇ ಉಸಿರಾಟದ ಸಮಸ್ಯೆ ಅವರನ್ನು ಕಾಡಿದೆ.