

ರಾಣೆಬೆನ್ನೂರ: ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರು ಶಸ್ತ್ರಚಿಕಿತ್ಸೆಗೆ ರೋಗಿಗಳಿಂದ ಲಂಚ ತೆಗೆದುಕೊಳ್ಳುತ್ತಿರುವ ವೀಡಿಯೊ ವೈರಲ್ ಆಗಿದ್ದು ಈ ಕುರಿತು ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಂಡು ಸಂಬಂಧಪಟ್ಟ ವೈದ್ಯರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂ ಹಾಗೂ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮಂಗಳವಾರ ನಗರದ ತಾಲೂಕು ಸರ್ಕಾರಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಲಾಯಿತು.
ನೇತೃತ್ವ ವಹಿಸಿದ್ದ ರೈತ ಸಂದ ಸಂಟನಾ ಕಾರ್ಯದಶಿರ್ ರವೀಂದ್ರಗೌಡ ಪಾಟೀಲ ಮಾತನಾಡಿ, ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ರೋಗಿ ಕಡೆಯಿಂದ ಶಸ್ತ್ರಚಿಕಿತ್ಸೆ ಮಾಡಿಸಲು ಎಂದು 5 ಸಾವಿರ ರೂ. ಲಂಚ ತೆಗೆದುಕೊಂಡಿದ್ದಾರೆ. ರೋಗಿಯ ಕಡೆಯವರು ಈ ಎಲ್ಲ ದೃಶ್ಯವನ್ನು ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಆದರೆ, ವೈದ್ಯನ ವಿರುದ್ಧ ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಲಂಚಾವತಾರ ಸಾಮಾನ್ಯ ಎನ್ನುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮ ಕೈಗೊಂಡು ಲಂಚ ಪಡೆದ ಸಿಬ್ಬಂದಿ ಹಾಗೂ ಆತ ಹೇಳಿದ ವೈದ್ಯನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸ್ಥಳಕ್ಕೆ ಬಂದ ಡಿಎಚ್ಒ ರಾಜೇಶ ಸೂರಗಿಹಳ್ಳಿ ಅವರಿಗೆ ಮನವಿ ಸಲ್ಲಿಸಿದರು.
ಪ್ರಮುಖರಾದ ನಿತ್ಯಾನಂದ ಕುಂದಾಪುರ, ಮಲ್ಲಿಕಾರ್ಜುನ ಸಾವಕ್ಕಳವರ, ಸಂಜೀವ ಕನವಳ್ಳಿ, ಪಾಲಾಕ್ಷಪ್ಪ ಕಡೆಮನಿ, ಚಂದ್ರಪ್ಪ ಬಣಕಾರ, ಸಂಜೀವ ಕನವಳ್ಳಿ, ಪರಶುರಾಮ ಕುರುವತ್ತಿ, ರಿಯಾಜ ದೊಡ್ಡಮನಿ, ಕೊಟ್ರೇಶಪ್ಪ ಎಮ್ಮೆ, ರಮೇಶ ಕನ್ನಪ್ಪನವರ, ತಿರುಕಪ್ಪ ಹುಲಿಕಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.