

Bridge Collapse: ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕುಸಿದಿದ್ದು, ಹಲವಾರು ಪ್ರವಾಸಿಗರು ನೀರಿನಲ್ಲಿ ಕೊಚ್ಚಿಹೋದ ಘಟನೆ ಮಹಾರಾಷ್ಟ್ರ ಜಿಲ್ಲೆಯ ಪುಣೆಯಲ್ಲಿ ವರದಿಯಾಗಿದೆ.
ಇಂದ್ರಯಾಣಿ ನದಿಯ ಸೇತುವೆ ದಿಢೀರ್ ಕುಸಿದ ಹಿನ್ನಲೆ ಸೇತುವೆಯಲ್ಲಿ ಪ್ರಯಾಣಿಸುತ್ತಿದ್ದ ಅನೇಕ ಪ್ರವಾಸಿಗರು ನೀರಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಳೆಗಾಲವಿದ್ದ ಕಾರಣ ಪ್ರವಾಸಿಗರ ಸಂಖ್ಯೆ ಹೆಚ್ಚಿತ್ತು ಎನ್ನಲಾಗಿದೆ.
ಸ್ಥಳಕ್ಕೆ ರಕ್ಷಣಾ ಪಡೆಗಳು ಕೂಡಲೇ ಧಾವಿಸಿದ್ದು, ಇಲ್ಲಿಯವರೆಗೆ 5ರಿಂದ 6 ಪ್ರವಾಸಿಗರನ್ನು ರಕ್ಷಿಸಲಾಗಿದೆ. ಪ್ರಸ್ತುತ ವರದಿ ಪ್ರಕಾರ, ಇಬ್ಬರು ಪ್ರವಾಸಿಗರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ. ಕಾಣೆಯಾದವರಿಗಾಗಿ ರಕ್ಷಣಾ ಪಡೆಗಳಿಂದ ಶೋಧ ಕಾರ್ಯ ಮುಂದುವರಿದಿದೆ.