VIDEO| ಗುಜರಾತ್​ನಲ್ಲಿ ಸೇತುವೆ ಕುಸಿತ; 10 ಮಂದಿ ನೀರು ಪಾಲು

bridge Collapse
Published on

ಅಹಮ್ಆಬಾದ್: ಶಿಥಿಲಗೊಂಡಿದ್ದ ಸೇತುವೆಯೊಂದು ಕುಸಿದ ಪರಿಣಾಮ ವಾಹನಗಳು ಸೇರಿದಂತೆ 10 ಮಂದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಗುಜರಾತ್​ನ ಸುರೇಂದ್ರನಗರ ಜಿಲ್ಲೆಯ ವಸ್ತಾಡಿ ಎಂಬಲ್ಲಿ ನಡೆದಿದೆ.

ಪ್ರಾಥಮಿಕ ವರದಿಗಳ ಪ್ರಕಾರ 10 ಮಂದಿ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಈವೆರೆಗೆ ನಾಲ್ಕು ಮಂದಿಯನ್ನು ರಕ್ಷಿಸಲಾಗಿದೆ. ಉಳಿದ ಆರು ಮಂದಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಕೆ.ಸಿ. ಸಂಪತ್ ಸುಮಾರು 40ವರ್ಷಗಳು ಹಳೆಯದಾದ ಸೇತುವೆಯೂ ಸುರೇಂದ್ರನಗರದಿಂದ ರಾಷ್ಟ್ರೀಯ ಹೆದ್ದಾರಿ ಹಾಗೂ 110 ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುತ್ತಿತ್ತು. ಸೇತುವೆ ಶಿಥಿಲಗೊಂಡಿದ್ದ ಕಾರಣ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೂ ವಾಹನಗಳು ಸಂಚರಿಸಿದ ಪರಿಣಾಮ ದುರ್ಘಟನೆ ಸಂಭವಿಸಿದೆ.

ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ನೀರಿನಲ್ಲಿ ಕೊಚ್ಚಿ ಹೋಗಿರುವವರ ಹುಡುಕಾಟ ನಡೆಸಲಾಗುತ್ತಿದೆ. ನೂತನ ಸೇತುವೆ ನಿರ್ಮಾಣಕ್ಕಾಗಿ ಹಣಕಅಸು ಮಂಜೂರಾತಿ ಮಾಡಲಾಗಿದ್ದು, ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಸಿ. ಸಂಪತ್​ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net