

ನವದೆಹಲಿ: ಆರು ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಿಜೆಪಿ ಸಂಸದ ಮತ್ತು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ಗೆ ಇದೀಗ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿದೆ.
ಬ್ರಿಜ್ ಭೂಷಣ್ ಶರಣ್ ಸಿಂಗ್ ಜತೆಗೆ ಡಬ್ಲ್ಯುಎಫ್‌ಐನಿಂದ ಅಮಾನತುಗೊಂಡಿರುವ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್‌ಗೂ ಕೂಡ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ಈ ಕುರಿತು ಗುರುವಾರದಿಂದ ಕೋರ್ಟ್ ಸಾಮಾನ್ಯ ಜಾಮೀನು ಅರ್ಜಿಗಳ ವಿಚಾರಣೆಯನ್ನು ನಡೆಸಲಿದೆ,(ಏಜೆನ್ಸೀಸ್).