ಬೃಂದಾವನ್ ಪ್ರಾಪರ್ಟೀಸ್​ ವಂಚನೆ ಆರೋಪ ಪ್ರಕರಣ; ಆರೋಪಿ ದಿನೇಶ್​ ಗೌಡ ಬಂಧನ

Untitled-1
Published on

ಬೆಂಗಳೂರು: ಒಂದು ಸಾವಿರಕ್ಕೂ ಹೆಚ್ಚು ಜನರಿಂದ ವಂಚನೆ ಆರೋಪ ಎದುರಿಸುತ್ತಿರುವ ಬೃಂದಾವನ್​ ಪ್ರಾಪರ್ಟೀಸ್​ ಮಾಲೀಕ, ವಂಚನೆಯ ಹಿಂದಿನ ಕಿಂಗ್​ಪಿನ್​ ದಿನೇಶ್​ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಬಂಧನದ ಕುರಿತು ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಧರ್ಮೇಂದರ್ ಕುಮಾರ್ ಮೀನಾ ತಿಳಿಸಿದ್ದಾರೆ.

ಆರೋಪಿ ದಿನೇಶ್ ಗೌಡ ಅವರನ್ನು ನಿನ್ನೆ ಹಾಸನ ಜಿಲ್ಲೆಯ ಅರಕಲಗೂಡಿನ ಬಳಿ ನಿನ್ನೆ ಬಂಧಿಸಲಾಗಿದೆ. ಬಂಧಿತ ಆರೋಪಿ ತನ್ನ ವಿರುದ್ಧ ಕೇಳಿಬಂದಿರುವ ಆರೋಪವನ್ನು ಒಪ್ಪಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಸುಮಾರು 50 ಕೋಟಿ ರೂಪಾಯಿಯಷ್ಟು ವಂಚನೆ ಆಗಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಪ್ರಕರಣವನ್ನು ದಾಖಲಿಸಿಕೊಂಡು, ಸಂಬಂಧಪಟ್ಟ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಆರೋಪಿಯಿಂದ ಸಾವಿರಕ್ಕೂ ಹೆಚ್ಚು ಮಂದಿಗೆ ಒಂದು ಸಾವಿರ ಕೋಟಿ ರೂಪಾಯಿಗೂ ಹೆಚ್ಚು ವಂಚನೆಯಾಗಿದೆ. ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಪಡೆದಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುವುದು. ಆರೋಪಿ ನಗರದ ವಿವಿಧೆಡೆ ಸೈಟ್​ ಕೊಡಿಸುವುದಾಗಿ ನೂರಾರು ಮಂದಿಗೆ ವಂಚನೆ ಮಾಡಿದ್ದಾರೆ. ಆ ಪೈಕಿ ರಾಜಾಜಿನಗರ ಠಾಣೆಯಲ್ಲೇ 830 ದೂರುಗಳು ದಾಖಲಾಗಿದ್ದು, ಆರೋಪಿಯನ್ನು ರಾಜಾಜಿನಗರ ಪೊಲೀಸರೇ ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net