ಲೋಕಸಭಾ ಚುನಾವಣೆಯಲ್ಲಿ ಬಿಎಸ್​ಪಿ ಸ್ವತಂತ್ರ ಸ್ಪರ್ಧೆ: ಮಾಯಾವತಿ

bsp
Published on

ಉತ್ತರಪ್ರದೇಶ: ಮುಂಬರುವ 2024ರ ಲೋಕ ಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಗಳ ಜತೆ ಮೈತ್ರಿ ಮಾಡಿಕೊಳ್ಳದೇ ತಂತ್ರವಾಗಿ ಸ್ಪರ್ಧಿಸಲಿದೆ ಎಂದು ಬಹುಜನ ಸಮಾಜ್​ ಪಾರ್ಟಿ (ಬಿಎಸ್​ಪಿ) ಮುಖ್ಯಸ್ಥೆ ಮಾಯಾವತಿ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಎಸ್‌ಪಿಯನ್ನು ಇಂಡಿಯಾ ಒಕ್ಕೂಟವನ್ನು ಸೇರಿಸಿಕೊಳ್ಳಲು ಹಲವು ನಾಯಕರು ಪ್ರಯತ್ನ ನಡೆಸುತ್ತಿದ್ದರು. ಬಿಎಸ್ಪಿ ಯಾವುದೇ ಪಕ್ಷದೊಂದಿಗೆ ಯಾವುದೇ ಒಕ್ಕೂಟವನ್ನು ರಚಿಸುವುದಿಲ್ಲ ಮತ್ತು ಇದನ್ನು ಹಲವು ಬಾರಿ ಹೇಳಲಾಗಿದೆ ಎಂದು ಮಾಯಾವತಿ ಹೇಳಿದರು.

ಈ ಕುರಿತು ತಮ್ಮ ಟ್ಟೀಟ್​ ಮಾಡಿರುವ ಮಾಯಾವತಿ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಎಸ್‌ಪಿ ಪದೇ ಪದೇ ಸ್ಪಷ್ಟಪಡಿಸುತ್ತಿದ್ದರೂ, ಪ್ರತಿದಿನ ಮೈತ್ರಿ ಬಗ್ಗೆ ವದಂತಿ ಹಬ್ಬಿಸುತ್ತಿರುವುದು ಬಿಎಸ್‌ಪಿ ಇಲ್ಲದೆ ಕೆಲವು ಪಕ್ಷಗಳು ಇಲ್ಲಿ ನಡೆಯುತ್ತಿಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ. ಆದರೆ ಬಿಎಸ್‌ಪಿಗೆ ಜನರ ಅಗತ್ಯವಿದೆ ಎಂದು ಹೇಳಿದ್ದಾರೆ.

ಇಡೀ ಸಮಾಜದ, ವಿಶೇಷವಾಗಿ ಬಡವರು, ಶೋಷಿತರು ಮತ್ತು ನಿರ್ಲಕ್ಷಿತರ ಹಿತಾಸಕ್ತಿ ಮತ್ತು ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು, ದೇಶಾದ್ಯಂತ ತನ್ನ ಜನರ ಹಿತದೃಷ್ಟಿಯಿಂದ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಬಿಎಸ್‌ಪಿ ಸ್ಪಷ್ಟಪಡಿಸಿದ್ದು, ಜನರು ವದಂತಿಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.

ಅವರ ಈ ನಿರ್ಧಾರದಿಂದಾಗಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟ ಸಂಘಟಿಸುವ ಪ್ರತಿಪಕ್ಷಗಳ ಯೋಜನೆಗೆ ಹಿನ್ನಡೆ ಉಂಟಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net