ಉಪ ಚುನಾವಣೆ ಸಿದ್ದತೆ ಕುರಿತು ಬಿಎಸ್‌ವೈ ಜೊತೆ ಬೊಮ್ಮಾಯಿ ಚರ್ಚೆ

bommai
Published on

ಬೆಂಗಳೂರು:
ಮೂರು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿಯೂ ಚಟುವಟಿಕೆ ಚುರುಕುಗೊಂಡಿದೆ.
ಮಾಜಿ ಸಿಎಂ ಹಾಗೂ ಬಿಜೆಪಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ದವಳಗಿರಿ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿ ಚುನಾವಣೆ ಬಗ್ಗೆ ಚರ್ಚೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಯಡಿಯೂರಪ್ಪ ನಮ್ಮ ಹಿರಿಯ ನಾಯಕರು, ಸಹಜವಾಗಿ ಭೇಟಿ ಮಾಡುತ್ತೇವೆ. ಚುನಾವಣೆಯ ಬಗ್ಗೆ ಅವರೊಂದಿಗೆ ಮಾತಾಡಿದ್ದೇನೆ ಎಂದರು.
ಶಿಗ್ಗಾವಿ ಕ್ಷೇತ್ರದ ಬಗ್ಗೆಯೂ ಚರ್ಚೆ ನಡೆಯಿತು. ಚುನಾವಣೆಗೆ ಏನೇನು ತಯಾರಿ ಮಾಡಿದ್ದೇವೆ ಅಂತ ಕೇಳಿದರು, ಎಲ್ಲ ಸಿದ್ದತೆ ಮಾಡಿಕೊಂಡಿರುವ ಬಗ್ಗೆ ತಿಳಿದ್ದೇನೆ. ಅಭ್ಯರ್ಥಿ ಆಯ್ಕೆ ಬಗ್ಗೆಯೂ ಚರ್ಚೆ ಆಗಿದೆ. ಅಂತಿಮವಾಗಿ ಯಾರಿಗೇ ಟಿಕೆಟ್ ಕೊಟ್ಟರೂ ಗೆಲ್ಲಿಸಬೇಕು ಎಂದಿದ್ದಾರೆ ಎಂದರು.
ದೆಹಲಿಗೆ ಅ.19ರ ನಂತರ ಹೋಗುತ್ತೇನೆ. ಎಲ್ಲ ಮೂರು ಕ್ಷೇತ್ರಗಳಲ್ಲೂ ಗೆಲ್ಲುದಕ್ಕೆ ಪ್ರಯತ್ನ ಮಾಡೋಣ ಅಂದಿದ್ದಾರೆ ಎಂದು ಹೇಳಿದರು.
ಚನ್ನಪಟ್ಟಣ ಟಿಕೆಟ್ ಕುರಿತು ಕೇಳಿದ ಪ್ರಶ್ನೆಗೆ ಚನ್ನಪಟ್ಟಣದ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ನಮ್ಮ ಪಕ್ಷದ ಹೈಕಮಾಂಡ್ ಸೇರಿ ತೀರ್ಮಾನ ಮಾಡುತ್ತಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net