

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಬಹಳಷ್ಟು ಪರಿಷ್ಕೃತ ಪ್ರಸ್ತಾವನೆಗಳಿಗೆ ಅನುಮೋದನೆ ಸಿಕ್ಕಿದೆ. ಅವುಗಳ ಪೈಕಿ, ರಾಷ್ಟ್ರೀಯ ಚಂಡಮಾರುತ ಅಪಾಯ ಉಪಶಮನ ಯೋಜನೆಯಡಿಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಿಗೆ ಹವಾಮಾನ ಮುನ್ಸೂಚನೆ ಮತ್ತು ಪ್ರಸರಣೆ ಪದ್ಧತಿಯನ್ನು ಅನುಷ್ಠಾನಗೊಳಿಸಲು 26.92 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆಯೂ ಸೇರಿದೆ.
ಇದಲ್ಲದೆ, ಸಂಪುಟ ಸಭೆಯ ಪ್ರಮುಖ ತೀರ್ಮಾನಗಳ ವಿವರ ಹೀಗಿವೆ.