ಫೋಕ್ಸೋ ಪ್ರಕರಣದಲ್ಲಿ ಬಿಎಸ್​ವೈಗೆ ಮಧ್ಯಂತರ ರಿಲೀಫ್​; ಖುದ್ದು ಹಾಜರಾತಿಗೂ ವಿನಾಯಿತಿ

ವಿಜಯವಾಣಿ - 2025-03-14T122445.998
Published on

ಬೆಂಗಳೂರು: ಫೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ವಿಚಾರಣೆ ನಡೆಸಿದ ಹೈಕೋರ್ಟ್​, ಇದೀಗ ಬಿಜೆಪಿ ಹಿರಿಯ ನಾಯಕರಿಗೆ ಮಧ್ಯಂತರ ರಿಲೀಫ್ ನೀಡಿದೆ.

ಕಾಗ್ನಿಜೆನ್ಸ್, ಸಮನ್ಸ್​ ಆದೇಶಕ್ಕೆ ತಡೆ ನೀಡಿರುವ ಹೈಕೋರ್ಟ್​, ಬಿಎಸ್​ವೈ ಖುದ್ದು ಹಾಜರಾತಿಗೂ ವಿನಾಯಿತಿ ಕೊಟ್ಟಿದೆ. ಬಿಎಸ್​ವೈ ಅರ್ಜಿ ಬಗ್ಗೆ ಇನ್ನೂ ಹೆಚ್ಚಿನ ಹಾಗೂ ವಿವರವಾದ ವಿಚಾರಣೆ ಆಗತ್ಯವಿದೆ ಎಂದು ಕೋರ್ಟ್​ ತಿಳಿಸಿದೆ.

ಏನಿದು ಪ್ರಕರಣ?

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಬಿ.ಎಸ್.​ ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಫೋಕ್ಸೋ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಯಿತು. ಈ ಹಿಂದೆ ಪ್ರಕರಣ ರದ್ದು ಕೋರಿ ಬಿಎಸ್​ವೈ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ರದ್ದುಗೊಳಿಸಿತ್ತು. ಇಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಇದೀಗ ಮಾಜಿ ಸಿಎಂಗೆ ಮಧ್ಯಂತರ ರಿಲೀಫ್ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net