2ನೇ ಸುತ್ತಿನ ಹೋರಾಟಕ್ಕೆ ಬಿಎಸ್‌ವೈ ಸಿದ್ಧತೆ

highcourt
Published on

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೈಕೋರ್ಟ್‌ನಲ್ಲಿ ಎರಡನೇ ಸುತ್ತಿನ ಹೋರಾಟ ನಡೆಸಲು ಮುಂದಾಗಿದ್ದಾರೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧದ ದೂರು, ಎಫ್‌ಐಆರ್, ಸಿಐಡಿ ಪೊಲೀಸರು ದಾಖಲಿಸಿರುವ ದೋಷಾರೋಪ ಪಟ್ಟಿ ಮತ್ತು 2025ರ ಫೆ.28ರಂದು ಪೋಕ್ಸೋ ವಿಶೇಷ ನ್ಯಾಯಾಲಯವು ಸಂಜ್ಞೆ ಪರಿಗಣಿಸಿ (ಕಾಗ್ನಿಜೆನ್ಸ್) ಜಾರಿಗೊಳಿಸಿರುವ ಸಮನ್ಸ್ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯಲ್ಲಿ ಪ್ರಕರಣದ ತನಿಖೆ ನಡೆಸಿರುವ ಸಿಐಡಿಯ ಎಸ್‌ಐಟಿಯನ್ನು ಪ್ರತಿವಾದಿ ಮಾಡಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net