ಸಿದ್ದರಾಮಯ್ಯ ಭರವಸೆ ಕೊಟ್ಟಂತೆ 10 ಕೆಜಿ ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ: ಬಿಎಸ್​ವೈ

bsy
Published on

ದಾವಣಗೆರೆ: ಕಾಂಗ್ರೆಸ್ ಸರ್ಕಾರ ಭರವಸೆ ಕೊಟ್ಟಂತೆ ಐದು ಯೋಜನೆ ಅನುಷ್ಠಾನ ಮಾಡಲು ಆಗದೇ ಇದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಕಾಂಗ್ರೆಸ್​​ ವಿರುದ್ಧವಾಗಿ ವಾಗ್ದಾಳಿ ಮಾಡಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರನ್ನು ಮರಳು ಮಾಡಲು ಕಾಂಗ್ರೆಸ್ ದಿನಕ್ಕೊಂದು ನಾಟಕ ಮಾಡುತ್ತಿದೆ. ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೇಳಿ ಭರವಸೆ ಕೊಟ್ಟಿದ್ರಾ? ಚುನಾವಣೆಯಲ್ಲಿ ಗೆಲ್ಲಬೇಕು ಅಂತ ಅವರೇ ಭರವಸೆ ಕೊಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರ ಈಗಾಗಲೇ 5 ಕೆಜಿ ಅಕ್ಕಿ‌ ಕೊಡುತ್ತಿದೆ. ಸಿಎಂ ಸಿದ್ದರಾಮಯ್ಯ ಭರವಸೆ ಕೊಟ್ಟಂತೆ 10 ಕೆಜಿ ಅಕ್ಕಿ ಕೊಡಬೇಕು. ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಆಕ್ರೋಶ ಹೊರಹಾಕಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net