

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 48 ಸಾವಿರ ಕೋಟಿ ರೂ. ಅನುದಾನ ಮೀಸಲಿಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಇಂದು ಬಹುನಿರೀಕ್ಷಿತ ಬಜೆಟ್ ಮಂಡಿಸಿದ ಅವರು 2022-23ನೇ ಸಾಲಿನಲ್ಲಿ 80 ಲಕ್ಷ ಮನೆಗಳನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಪೂರ್ಣಗೊಳಿಸಲಾವುದು ಎಂದರು. ಅಲ್ಲದೆ, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ 60,000 ಮನೆಗಳನ್ನು ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳಾಗಿ ಗುರುತಿಸಲಾಗುವುದು ಎಂದು ತಿಳಿಸಿದರು.
3.8 ಕೋಟಿ ಕುಟುಂಬಗಳಿಗೆ ನಲ್ಲಿ ನೀರು ಪಡೆಯಲು 60,000 ಕೋಟಿ ರೂ. ಅನ್ನು ಬಜೆಟ್ನಲ್ಲಿ ಮೀಸಲಿಡಲಾಗಿದೆ ಎಂದು ವಿತ್ತಸಚಿವೆ ತಿಳಿಸಿದರು.