ಬಜೆಟ್ ಯೋಜನೆಗಳ ಜಾರಿಗೆ ಮುಂದಾಗಿರುವ ಜಿಲ್ಲಾಡಳಿತ

siddu
Published on

ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟು ನಿಟ್ಟಾದ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬಜೆಟ್ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತಗಳು ಮುಂದಾಗಿವೆ.
ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲಿಯೇ ಅಧಿಕಾರಗಳ ಸಭೆ ನಡೆಸಿದ್ದ ಸಿಎಂ, ಬಜೆಟ್ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡುವಂತೆ ತಾಕೀತು ಮಾಡಿದ್ದರು. ಈ ನಿಟ್ಟಿನಲ್ಲಿ ಒಂದೊಂದೆ ಜಿಲ್ಲೆಯ ಜಿಲಾಧಿಕಾರಿಗಳು ಅಧಿಕಾರಿಗಳ ಸಭೆ ನಡೆಸಲು ಮುಂದಾಗಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಶೀಘ್ರದಲ್ಲಿಯೇ ಸಭೆ ನಡೆಸಲಿರುವ ಅವರು, ತಾಲೂಕು ಆಡಳಿತಕ್ಕೂ ಈ ಬಗ್ಗೆ ಸೂಚನೆಗಳನ್ನು ರವಾನಿಸಲಿದ್ದಾರೆ.
ತಾಲೂಕು ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಿ ಯೋಜನೆಗಳ ಜಾರಿಗೆ ಕ್ರಮ ವಹಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.
ಚುನಾವಣೆ ಇದ್ದ ಕಾರಣದಿಂದ ಬಜೆಟ್ ಯೋಜನೆಗಳ ಅನುಷ್ಠಾನಕ್ಕೆ ಸಮಸ್ಯೆ ಎದುರಾಗಿತ್ತು. ಈಗ ಯಾವ ಅಡೆ ತಡೆಗಳು ಇಲ್ಲ. ಒಂದೊಂದೇ ಇಲಾಖೆಯ ಯೋಜನೆಗಳನ್ನು ಜಾರಿಗೆ ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net