ಬಜೆಟ್ ತಯಾರಿ: ಹಣಕಾಸು ಇಲಾಖೆ ಅಧಿಕಾರಿಗಳ ಸರಣಿ ಸಭೆ

money (1)
Published on

ಬೆಂಗಳೂರು:
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ೆ.16ರಂದು ಬಜೆಟ್ ಮಂಡನೆಗೆ ದಿನಾಂಕ ನಿಗಧಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಅದಕ್ಕೆ ಪೂರ್ವಭಾವಿ ಸಿದ್ಧತೆಗಳನ್ನು ಅಧಿಕಾರಿಗಳು ನಡೆಸುತ್ತಿದ್ದಾರೆ.
ಹಣಕಾಸು ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸರಣಿ ಸಭೆಗಳು ವಿಧಾನಸೌಧದಲ್ಲಿ ನಡೆದಿದ್ದು, ತಯಾರಿ ಮಾಡಿಕೊಳ್ಳಲಾಗುತ್ತಿದೆ.
ಇಲಾಖಾವಾರು ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳ ಬಜೆಟ್ ಪೂರ್ವಭಾವಿ ಸಭೆಗಳು ಜ.20ರಿಂದ ಪ್ರಾರಂಭವಾಗಲಿದ್ದು, ಅದಕ್ಕೂ ಮುನ್ನವೇ ಅಧಿಕಾರಿಗಳ ಸಭೆಗಳು ನಡೆಯುತ್ತಿವೆ.
ಹಣಕಾಸು ಇಲಾಖೆ ಜವಬ್ದಾರಿ ಹೊತ್ತಿರುವ ಎಲ್.ಕೆ.ಅತೀಕ್ ಅವರು, ಮೊದಲ ಸಭೆಯನ್ನು ನಡೆಸಿದ್ದು, ಈ ಬಾರಿ ಬಜೆಟ್ ಸಿದ್ಧತೆಗಳು ಹೇಗಿರಲಿವೆ? ಎನ್ನುವ ಸ್ಥೂಲ ಮಾಹಿತಿಯನ್ನು ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಿ ಅನುದಾನವನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಬಜೆಟ್‌ನಲ್ಲಿ ಹೆಚ್ಚಿನ ಬೇಡಿಕೆಗಳನ್ನು ಈಡೇರಿಸಲು ಅನುದಾನದ ಹೊಂದಾಣಿಕೆ ಕಷ್ಟವಿದೆ ಎನ್ನುವ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು, ಮುಖ್ಯಮಂತ್ರಿಗಳು ನೀಡುವ ನಿರ್ದೇಶನಗಳನ್ನಷ್ಟೆ ಪರಿಗಣಿಸಿ ಬಜೆಟ್ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಕೂಡ ಬಜೆಟ್ ಪೂರ್ವಭಾವಿ ಸಭೆಗಳಿಗೆ ಹೆಚ್ಚಿನ ಸಮಯವನ್ನು ಮೀಸಲಿಟ್ಟಿದ್ದಾರೆ. ಬಜೆಟ್ ಮುಗಿಯುವ ತನಕ ಸಂಬಂದಿಸಿದ ಎಲ್ಲಾ ಅಧಿಕಾರಿಗಳು ರಜೆ ತೆಗೆದುಕೊಳ್ಳುವುದು ಬೇಡ ಎನ್ನುವ ಸೂಚನೆಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ನೀಡಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net