ದುಶ್ಚಟಮುಕ್ತ ಸಮಾಜ ನಿರ್ಮಿಸಿ

27M.D.R.8
ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಆರ್.ಕೆ.ಎಜುಕೇಷನ್ ಟ್ರಸ್ಟ್‌ನಲ್ಲಿ ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆ ಸದಸ್ಯ ಲಿಂಗೇಗೌಡ ಉದ್ಘಾಟಿಸಿದರು. ಹಾಲಪ್ಪ, ಪ್ರವೀಣ್, ಮಹಮದ್ ಇದ್ದರು.
Published on

ಮದ್ದೂರು: ತಾಲೂಕಿನ ಕೆ.ಹೊನ್ನಲಗೆರೆ ಆರ್.ಕೆ.ಎಜುಕೇಷನ್ ಟ್ರಸ್ಟ್‌ನಲ್ಲಿ ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಜನ ಜಾಗೃತಿ ವೇದಿಕೆ ಸದಸ್ಯ ಲಿಂಗೇಗೌಡ ಮಾತನಾಡಿ, ಮಕ್ಕಳಿಗೆ ದುಶ್ಚಟ ಅಂದರೆ ಕೇವಲ ಮದ್ಯಪಾನ, ಧೂಮಪಾನ, ಗಾಂಜಾ ಸೇವನೆ ಅಷ್ಟೇ ಅಲ್ಲ ಅತಿಯಾದ ಮೊಬೈಲ್ ಬಳಕೆ, ತಂದೆ-ತಾಯಿಗಳಿಗೆ ಗುರು ಹಿರಿಯರಿಗೆ ಗೌರವ ಕೊಡದೆ ಇರುವುದು ಕೂಡ ದುಶ್ಚಟ. ದುಶ್ಚಟಮುಕ್ತ ಸಮಾಜ ನಿರ್ಮಾಣದಲ್ಲಿ ಮಕ್ಕಳ ಪಾತ್ರ ಬಹಳಷ್ಟು ಮುಖ್ಯ ಎಂದು ತಿಳಿಸಿದರು.

ಸಂಸ್ಥೆಯ ಯೋಜನಾಧಿಕಾರಿ ಹಾಲಪ್ಪ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಜನರಿಗೆ ಅನುಕೂಲ ಕಲ್ಪಿಸಿದೆ. ಈ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಪ್ರಾಂಶುಪಾಲ ಪ್ರವೀಣ್, ಉಪನ್ಯಾಸಕ ಮಹಮದ್, ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net